ಸವಣೂರು (ಹಾವೇರಿ): ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಎಸ್.ಸಿ. ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡರು.

ಡಾ. ಬಿ.ಆರ್. ಅಂಬೇಡ್ಕರ ನಗರದ ಪಂಚ ಕಮಿಟಿ, ದಲಿತ ಸಂಘರ್ಷ ಸಮಿತಿ ಮತ್ತು ಆದಿ ಜಾಂಬವ ಯುವ ಬ್ರಿಗೇಡ್ ವತಿಯಿಂದ ಎರಡನೇ ಬಾರಿ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸ್ಪರ್ಧಾತ್ಮಕ ಪರೀಕ್ಷೆಗೆ ಚಾಲನೆ ನೀಡಲಾಯಿತು.

ತಹಶೀಲ್ದಾರ್ ರವಿಕುಮಾರ ಕೊರವರ ಮಾತನಾಡಿ, ‘ಇಂದಿನ ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಜೀವನ ಆದರ್ಶಗಳನ್ನು ಪಾಲಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನೌಕರಿ ಗಿಟ್ಟಿಸಲು ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಇಂದಿನಿಂದಲೇ ಸಿದ್ಧರಾಗಬೇಕು’ ಎಂದರು.

ಮುಖಂಡರಾದ ತಿಮ್ಮಣ್ಣ ಹಗರಿಬೊಮ್ಮನಹಳ್ಳಿ, ಮರಪ್ಪ ಮುಗಳಿ, ರಮೇಶ ಹರಿಜನ, ಸುಭಾಸ್ ಮಜ್ಜಗಿ, ಆನಂದ್ ವಡಕಮ್ಮನವರ, ಶಂಕರ್ ಮರಗಪ್ಪನವರ, ಬಸವರಾಜ್ ಮೈಲಮ್ಮನವರ, ಶಿವು ದಾವಣಗೆರೆ, ರಂಗಪ್ಪ ಮೈಲಮ್ಮನವರ, ಶಾಂತು ಕೆಂಚಣ್ಣವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-22-2092059529

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.