ಹಿರೇಕೆರೂರ: ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಿದರು. ಸಾಮಾಜಿಕ ನ್ಯಾಯ, ಭ್ರಾತೃತ್ವ, ಸಮಾನತೆ ಮತ್ತು ಸಹೋದರತ್ವ ಇದ್ದಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂಬುದನ್ನು ಅವರು ಸಾರಿದರು. ಶೋಷಿತ ಸಮಾಜಗಳು ಇತರರಂತೆ ಬದುಕು ಕಟ್ಟಿಕೊಳ್ಳಲು ಅಂಬೇಡ್ಕರ್ ಶ್ರಮಿಸಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿರುವ ಸರ್ವಜ್ಞ ಕಲಾ ಭವನದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಧಿಕಾರ ಮತ್ತು ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಡಾ.ಬಾಬು ಜಗಜೀವನರಾಂ ಅವರಿಗೆ ಸಲ್ಲುತ್ತದೆ. ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು, ದೇಶದ ಜನರು ಅಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಆರಂಭಿಸಿ ನೆರವಾದರು ಎಂದು ತಿಳಿಸಿದರು.

ತಾಲ್ಲೂಕು ಪಂಚಾಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿ ಎನ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಶಿಕ್ಷಕ ಮಂಜುನಾಥ ಸುಳಗನ್ನಿ ಉಪನ್ಯಾಸ ನೀಡಿದರು. ಮುಖಂಡರಾದ ಎನ್.ಎಂ. ಈಟೇರ್ ಮತ್ತು ಬಿ.ಆರ್. ಪುಟ್ಟಣ್ಣನವರ ಮಾತನಾಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಚ್.ಎಚ್. ಜಾಡರ ಕಾರ್ಯಕ್ರಮ ನಿರೂಪಿಸಿದರು. ಮೆರವಣಿಗೆ ನಡೆಯಿತು. ಸಿಪಿಐ ಮಂಜುನಾಥ ಪಂಡಿತ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ್, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರಡಿಕಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ ಮುಡಿಯಮ್ಮನವರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೋಡಿ ಭಿಮರಾಯ ಎನ್.ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-22-1597761419

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.