ಹಾವೇರಿ: ಎಂಜಿನಿಯರಿಂಗ್, ಕೃಷಿ, ಪಶುಸಂಗೋಪನೆ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ರಾಜ್ಯದಾದ್ಯಂತ ಏಪ್ರಿಲ್ 23 ಹಾಗೂ 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. ಹಾವೇರಿ ಜಿಲ್ಲೆಯಲ್ಲಿಯೂ 4,651 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 11 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಸುಗಮ ರೀತಿಯಲ್ಲಿ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಿಕೊಂಡಿರುವ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು, ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ‘ಸಾಮಾನ್ಯ ಪ್ರವೇಶ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ’ ನಡೆಸಿದರು. ಕೊಠಡಿ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು, ತ್ರಿಸದಸ್ಯ ಸಮಿತಿ ಸದಸ್ಯರು, ವೀಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಮಾತನಾಡಿ, ‘ಏಪ್ರಿಲ್ 23 ಹಾಗೂ 24ರಂದು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಯಾವುದೇ ಲೋಪವಾಗದಂತೆ ಪಾರದರ್ಶಕವಾಗಿ ಹಾಗೂ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಸಿಇಟಿ ಪರೀಕ್ಷೆ ಬಹಳ ಸೂಕ್ಷ್ಮವಾಗಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಎಚ್ಚರಿಕೆ ನೀಡಿದರು.

ಸಿ.ಸಿ.ಟಿ.ವಿ. ಕಡ್ಡಾಯ: ‘ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ. ಅಳವಡಿಕೆ ಹಾಗೂ ಕೊಠಡಿಯೊಳಗೆ ಗಡಿಯಾರ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಗಾಳಿ, ಬೆಳಕು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲ ಸೌಕರ್ಯ ಒದಗಿಸಬೇಕು. ಪರೀಕ್ಷಾ ವೀಕ್ಷಕರು, ಸೌಲಭ್ಯಗಳ ಕುರಿತು ಪೂರ್ವ ಪರಿಶೀಲನೆ ನಡೆಸಿ ನಿಯಮಾನುಸಾರ ನಿರ್ದೇಶನ ನೀಡಬೇಕು’ ಎಂದು ಜಿಲ್ಲಾಧಿಕಾರಿ ಹೇಳಿದರು.

ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳು; ‘ಮಾರ್ಗಸೂಚಿ ಅನುಸಾರ ಒಂದು ಪರೀಕ್ಷಾ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆಯನ್ನು ಮಾಡಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದ ನೆಲಮಹಡಿಯಲ್ಲಿ ಆಸನದ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಕೊಠಡಿ ಮೇಲ್ವಿಚಾರಕರನ್ನು ಲಾಟರಿ ಮೂಲಕ ನಿಯೋಜಿಸಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಬ್ಲೂಟೂತ್, ಇಯರ್ ಫೋನ್ಗಳು, ಮೈಕ್ರೋಫೋನ್, ಪೇಜರ್, ವೈರಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ಗಡಿಯಾರಗಳನ್ನು ನಿಷೇಧಿಸಿದೆ. ವಿದ್ಯಾರ್ಥಿಗಳು ಹಾಗೂ ಮೇಲ್ವಿಚಾರಕರು ಇದನ್ನು ಬಳಸುವಂತಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಜೆರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಬೇಕು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಎಲ್. ಮಾತನಾಡಿ, ‘ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿ ಹಾಗೂ ಸಿಬ್ಬಂದಿಯ ಮಕ್ಕಳು ಪರೀಕ್ಷೆ ಬರೆಯುತ್ತಿದ್ದರೆ, ಅಂಥವರ ಬಗ್ಗೆ ಪರಿಶೀಲಿಸಬೇಕು. ವಿಜ್ಞಾನ ವಿಷಯದ ಉಪನ್ಯಾಕರನ್ನು ಪರೀಕ್ಷಾ ಕಾರ್ಯಕ್ಕೆ ಬಳಸಿಕೊಳ್ಳುವಂತಿಲ್ಲ. ಪ್ರಶ್ನೆ ಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆ ಬಂಡಲ್ ಮಾಡುವಾಗ ಸಿ.ಸಿ.ಟಿ.ವಿ. ಕ್ಯಾಮೆರಾ ಇರಬೇಕು’ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ ಶಾಸ್ತ್ರಿ, ಹೆಚ್ಚುವರಿ ಜಿಲ್ಲಾ ಎಸ್.ಪಿ. ಎಲ್.ವೈ. ಶಿರಕೋಳ, ಜಿ.ಪಂ. ಯೋಜನಾ ನಿರ್ದೇಶಕ ಎಂ.ವೈ. ಮೀಶೆ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-22-1273770930

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.