ಹಾವೇರಿ: ‘ರಾಜ್ಯದಲ್ಲಿರುವ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಪ್ರತಿ ಮನೆ ಮನೆ ಸಮೀಕ್ಷೆ ನಡೆಸಿ, ಶಾಲೆಗೆ ಹೋಗದ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಬೇಕು. ಅಂಥವರನ್ನು ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಬೇಕು’ ಎಂದು ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನದ ಜಿಲ್ಲಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಜಾಗೃತಿ ಮೂಡಿಸಬೇಕು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಪ್ರತಿ ಮಗುವಿಗೂ ಶಿಕ್ಷಣ ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ಡೆಲಿವರಿ ನಿರ್ದೇಶನಾಲಯ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿದೆ. ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಸಮೀಕ್ಷೆ ಮಾಡುತ್ತದೆ. ಆ ಮೂಲಕ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ತರುವಂತಹ ಕಾರ್ಯವಾಗಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು. ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

‘ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ದೊರೆಯಬೇಕಿರುವ ಪ್ರತಿಯೊಂದು ಸೌಲಭ್ಯಗಳು ಕಡ್ಡಾಯವಾಗಿ ತಲುಪಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಂದ ಅಂಗನವಾಡಿ ಮಕ್ಕಳ ಮಾಹಿತಿ ಪಡೆದು, 1ನೇ ತರಗತಿ ಪ್ರವೇಶಕ್ಕೆ ಅರ್ಹವಿರುವ ಮಕ್ಕಳನ್ನು ಶಾಲೆಗಳಿಗೆ ಸೇರ್ಪಡೆಗೊಳಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ತಿಳಿಸಿದರು.

‘ಕುಶಲ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿನ ಕುಶಲ ಘಟಕಗಳನ್ನು ಗುರುತಿಸಿ, ಅರ್ಹ ಯುವಕರಿಗೆ ಅನುಗುಣವಾಗಿ ಸೂಕ್ತ ತರಬೇತಿ ಕೊಡಿಸಬೇಕು. ಅವರನ್ನು ಉದ್ಯೋಗಸ್ಥರನ್ನಾಗಿ ಮಾಡಬೇಕು. ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಇರುವಂಥ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಿ, ಅವರಿಗೆ ಸೌಲಭ್ಯ ತಲುಪಿಸಬೇಕು’ ಎಂದು ಹೇಳಿದರು.

‘ಕೊಳಗೇರಿ ಪ್ರದೇಶಗಳಲ್ಲಿರುವ ಮಕ್ಕಳು ಹಾಗೂ ಅಂಗವಿಕಲರಿಗಾಗಿ ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ. ಅವುಗಳು ಅರ್ಹರಿಗೆ ಸಿಗುತ್ತಿಲ್ಲವೆಂದು ಹಲವರು ಆರೋಪಿಸುತ್ತಿದ್ದಾರೆ’ ಎಂದ ಅಧ್ಯಕ್ಷ ಯು.ನಿಸಾರ್ ಅಹಮದ್, ‘ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲೆಯ ಎಲ್ಲ ಕೊಳಗೇರಿ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಮಾಡಬೇಕು’ ಎಂದು ತಿಳಿಸಿದರು.

‘ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕೈಗೊಳ್ಳಲು ಅನುಕೂಲವಾಗುವಂತೆ, ಶೈಕ್ಷಣಿಕ ಸಾಲ ಕೊಡಿಸಬೇಕು. ಬ್ಯಾಂಕ್ಗಳು ಸಾಲ ನೀಡಲು ಹಿಂದೇಟು ಹಾಕಬಾರದು’ ಎಂದು ತಾಕೀತು ಮಾಡಿದರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್, ಜಿಲ್ಲಾ ಎಸ್.ಪಿ. ಯಶೋದಾ ವಂಟಗೋಡಿ ಸಭೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-22-355734682

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.