ಹಾವೇರಿ: ‘ಕನ್ನಡ ಸಾಹಿತ್ಯ ಪರಿಷತ್ತು ಅಥವಾ ಯಾವುದೇ ಸಂಸ್ಥೆಯು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ, ಕ್ರಿಯಾಶೀಲವಾದ ಸಕ್ರಿಯ ತಂಡ ಇರಬೇಕು. ಆಗ ಮಾತ್ರ ಸಂಸ್ಥೆಯ ಗುರಿ ಮತ್ತು ಉದ್ದೇಶ ಈಡೇರಲು ಸಾಧ್ಯ’ ಎಂದು ಹುತಾತ್ಮ ಮೈಲಾರ ಮಹಾದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ನ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.

ಇಲ್ಲಿಯ ವಿನಾಯಕ ನಗರದಲ್ಲಿರುವ ‘ಗಂಗಾಧರ ನಂದಿ ಕನ್ನಡ ಸಾಹಿತ್ಯ ಭವನ’ದಲ್ಲಿ ಇತ್ತೀಚೆಗೆ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಹಾವೇರಿ ಜಿಲ್ಲೆಯಲ್ಲಿ ಜರುಗಿದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು. ಈ ಮೂಲಕ ಕಸಾಪ ಜಿಲ್ಲಾ ಘಟಕವು ಇತಿಹಾಸದ ಪುಟಗಳಲ್ಲಿ ಸದಾ ಉಳಿಯುವ ಕಾರ್ಯ ಮಾಡಿದೆ. ಸಾಂಘಿಕ ಪ್ರಯತ್ನ ಮತ್ತು ಸತತ ಪರಿಶ್ರಮದ ಫಲವಾಗಿ ಕನ್ನಡ ಪರಂಪರೆಯನ್ನು ಬೆಳೆಸುವ ಕಾರ್ಯ ಮಾಡುತ್ತಿರುವ ಜಿಲ್ಲೆಯ ಕನ್ನಡದ ಮನಸ್ಸುಗಳು ಮಾದರಿ ರೂಪದಲ್ಲಿ ಬೆಳೆದಿರುವುದು ಅಭಿಮಾನ ಮೂಡಿಸಿದೆ’ ಎಂದರು.

ಬೆಳಗಾವಿ ಅಂಜುಮನ್ ಕಲಾ ಹಾಗೂ ವಾಣಿಜ್ಯ ಪದವಿ ಕಾಲೇಜಿನ ಪ್ರಾಂಶುಪಾಲ ಎಚ್.ಐ. ತಿಮ್ಮಾಪುರ ಮಾತನಾಡಿ, ಕಸಾಪ ಕನ್ನಡದ ಅಕ್ಷರ ಜಾತ್ರೆ ಆಯೋಜಿಸುವ ಮೂಲಕ ನೂರು ವರ್ಷಗಳನ್ನು ದಾಟಿ ಬಂದಿರುವುದು ಮೈಲಿಗಲ್ಲು’ ಎಂದರು.

ಇದೇ ಸಂದರ್ಭದಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಲಕ್ಷ್ಮಿ ವಾಲ್ಮೀಕಿ, ಆರತಿ ಆನ್ವೇರಿ, ಶಂಭುಲಿಂಗ ಸುಂಕದ, ಪ್ರಸನ್ನಕುಮಾರ ಪಾಟೀಲ ಅವರನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಪರಿಷತ್ತಿನ ಜಿಲ್ಲಾ ಘಟಕದ ಕೋಶಾಧ್ಯಕ್ಷ ಎಸ್.ಎನ್. ದೊಡ್ಡಗೌಡ್ರ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಯು ಅಶೋಕ ಶಾಸ್ತ್ರಿ, ಕವಿ ಸತೀಶ ಕುಲಕರ್ಣಿ, ವೈ.ಬಿ. ಆಲದಕಟ್ಟಿ, ಶಂಕರ ಸುತಾರ, ಪೃಥ್ವಿರಾಜ್ ಬೆಟಗೇರಿ, ವಿ.ಪಿ. ದ್ಯಾಮಣ್ಣವರ, ಹನುಮಂತಗೌಡ ಗೊಲ್ಲರ, ಈರಣ್ಣ ಬೆಳವಡಿ, ಎನ್.ಬಿ. ಕಾಳೆ, ಸಿ.ಎಸ್.ಮರಳಿಹಳ್ಳಿ, ಸಿದ್ದೇಶ್ವರ ಹುಣಸಿಕಟ್ಟಿಮಠ ಇದ್ದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ರಟ್ಟೀಹಳ್ಳಿ: ಕನ್ನಡ ನಾಡು ಬೆಳವಣಿಗೆಗಾಗಿ ಅವಿರತ ಸೇವೆ ಸಲ್ಲಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ ಇದೀಗ ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದು ಪಟ್ಟಣದ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಪ್ರಿಯದರ್ಶಿನಿ ಮಹಾವಿದ್ಯಾಲಯದ ಸಭಾಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ನ 112ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿಕೊಂಡು ಮಾತನಾಡಿದರು.

ಪ್ರಾಚಾರ್ಯ ಕೆ.ಆರ್. ಕೋಣ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕಿನ ಎಸ್.ಎಸ್.ಎಲ್.ಸಿ. ಪಿ.ಯು.ಸಿ. ಹಾಗೂ ಪದವಿ ತರಗತಿಗಳನ್ನು ಅತೀ ಹೆಚ್ಚಿನ ಅಂಕಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಹೇಮಣ್ಣ ನಿಂಬೆಗೊಂದಿ, ಜೆ.ಸಿ. ಹೊಸರಾಯಪ್ಪನವರ, ಸುರೇಶ ಮಲ್ಲಾಡದ,ಪ್ರಾಚಾರ್ಯ ರಾಘವೇಂದ್ರ ಎ.ಜಿ. ಗಣೇಶ ವೇರ್ಣೇಕರ, ಎನ್.ಸಿ. ಕಠಾರೆ ಸೇರಿದಂತೆ ಹಲವರು ಇದ್ದರು.

ರಾಣೆಬೆನ್ನೂರು: ಕನ್ನಡ ಭಾಷೆ ಭಾವನೆಗಳ ಸಂವಹನದ ಅತ್ಯುತ್ತಮ ಸಾಧನ. ಅದು ನಮ್ಮ ಅಸ್ತಿತ್ವದ ಮೂಲ ಸ್ವರೂಪ, ನಮ್ಮ ಸಂಸ್ಕೃತಿಯ ಪ್ರತಿಬಿಂಬ ಎಂದು ಸಂಜೀವಿನಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರಭುಲಿಂಗಪ್ಪ ಕೋಡದ ಹೇಳಿದರು.

ಇಲ್ಲಿನ ವಾಗೀಶನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ಈಚೆಗೆ ನಡೆದ 112 ನೇ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನ ಆಚರಣೆ ಕಾರ್ಯಕ್ರಮದಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಿಕ್ಷಕ ಎಸ್. ಎಂ. ತುಕ್ಕಪ್ಪನವರ ಪರಿಷತ್ತಿನ ಪರಿಚಯ ಭಾಷಣ ಮಾಡಿದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಭಾಕರ ಶಿಗ್ಲಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತ ವೀರೇಶ ಜಂಬಿಗಿ, ಮೈಸೂರು ದತ್ತಿ ಪ್ರಶಸ್ತಿ ಪುರಸ್ಕೃತ ಪ್ರೊ. ಕಾಂತೇಶರೆಡ್ಡಿ ಗೋಡಿಹಾಳ ಅವರನ್ನು ಗೌರವಿಸಲಾಯಿತು. ನಗರದ ಶಾರದಾ ಭರತ ನಾಟ್ಯ ಕಲಾ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಜಗದೀಶ ಮಳೆಮಠ, ಎಚ್. ಎಚ್. ದೊಡ್ಡಮನಿ, ಆರ್. ಬಿ. ಪಾಟೀಲ, ವಾಸಪ್ಪ ಕುಸಗೂರ, ಜಿ. ಜಿ. ಹೊಟ್ಟಿಗೌಡರ, ನಿತ್ಯಾನಂದ ಕುಂದಾಪುರ, ಪಿ.ವಿ. ಮಠದ, ಎಚ್. ಎಚ್. ಜಾಡರ, ವಿದ್ಯಾವತಿ ಮಳಿಮಠ, ಮಲ್ಲಿಕಾರ್ಜುನ ಸಾವಕ್ಕಳವರ, ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-22-824572344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.