ಹಾವೇರಿ: ನಗರದ ಐದು ಕೇಂದ್ರಗಳಲ್ಲಿ ಭಾನುವಾರ ನೀಟ್ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 2,316 ವಿದ್ಯಾರ್ಥಿಗಳ ಪೈಕಿ 2,251 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 65 ವಿದ್ಯಾರ್ಥಿಗಳು ಗೈರಾದರು.

ಎಂಬಿಬಿಎಸ್, ದಂತ ಮತ್ತು ಆಯುಷ್ ಸೇರಿದಂತೆ ಇತರೆ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶಕ್ಕೆ ಅಗತ್ಯವಿರುವ ನೀಟ್ ಪರೀಕ್ಷೆಯನ್ನು ಭಾನುವಾರ ದೇಶದಾದ್ಯಂತ ನಡೆಸಲಾಯಿತು.

ಹಾವೇರಿಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕರ ಪದವಿ ಪೂರ್ವ ಕಾಲೇಜು, ದೇವಗಿರಿ ಸರ್ಕಾರಿ ಎಂಜಿನಿಯರ್ ಕಾಲೇಜ್ ಹಾಗೂ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್, ಪರಿಶೀಲನೆ ನಡೆಸಿದರು. ‘ಜಿಲ್ಲೆಯಾದ್ಯಂತ ನೀಟ್ ಪರೀಕ್ಷೆಯು ಸುಗಮವಾಗಿ ನಡೆದಿದೆ’ ಎಂದು ನಾಗರಾಜ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-22-1852318539

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.