ಹಾವೇರಿ: ಎಂಬಿಬಿಎಸ್, ದಂತ ಮತ್ತು ಆಯುಷ್ ಸೇರಿದಂತೆ ಇತರೆ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶಕ್ಕೆ ಅಗತ್ಯವಿರುವ ನೀಟ್ ಪರೀಕ್ಷೆಯು ದೇಶದಾದ್ಯಂತ ಮೇ 3ರಂದು ನಡೆಯಲಿದೆ. ನಗರದ ಐದು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಜಿಲ್ಲೆಯ 2,360 ವಿದ್ಯಾರ್ಥಿಗಳು ಈ ಬಾರಿ ನೀಟ್ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಹಾವೇರಿಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕರ ಪದವಿ ಪೂರ್ವ ಕಾಲೇಜು, ದೇವಗಿರಿ ಸರ್ಕಾರಿ ಎಂಜಿನಿಯರ್ ಕಾಲೇಜ್ ಹಾಗೂ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಲ್ಲಿ ಈ ಬಾರಿ ನೀಟ್ ಪರೀಕ್ಷೆ ನಡೆಯಲಿದೆ.

ಪರೀಕ್ಷೆ ಸಿದ್ಧತೆ ಬಗ್ಗೆ ಚರ್ಚಿಸಲು ಹಾವೇರಿಯ ಕಚೇರಿಯಲ್ಲಿ ಬುಧವಾರ ‘ನೀಟ್ ಪರೀಕ್ಷಾ ಪೂರ್ವಭಾವಿ ಸಭೆ’ ನಡೆಸಿದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ‘ನೀಟ್ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ನೀಟ್ ಪರೀಕ್ಷೆಯು ಬಹಳ ಸೂಕ್ಷ್ಮವಾಗಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕೆಲಸದಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ನಿಯಮಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು’ ಎಂದರು.

‘ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಬೇಕು. ಜಾಮರ್ ಹಾಗೂ ಕೊಠಡಿಯೊಳಗೆ ಗಡಿಯಾರ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಪೀಠೋಪಕರಣ ಸೇರಿ ಮೂಲ ಸೌಕರ್ಯ ಕಲ್ಪಿಸಬೇಕು’ ಎಂದರು.

ಎಲೆಕ್ಟ್ರಾನಿಕ್ಸ್ ಉಪಕರಣ ನಿಷೇಧ: ‘ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್, ಬ್ಲೂಟೂತ್, ಇಯರ್ ಫೋನ್ಗಳು, ಮೈಕ್ರೋಫೋನ್, ಪೇಜರ್, ವೈರಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ಗಡಿಯಾರಗಳನ್ನು ನಿಷೇಧಿಸಿದೆ. ಆಕಸ್ಮಾತ್ ಯಾರಾದರೂ ತಂದರೆ, ಅವರ ವಿರುದ್ಧ ಕ್ರಮವಾಗಲಿದೆ’ ಎಂದರು.

‘ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ವಸ್ತ್ರ ಸಂಹಿತೆ ಪಾಲಿಸಬೇಕು. ಉದ್ದ ತೋಳಿನ ಹಾಗೂ ತಲೆ ಮುಚ್ಚುವ ಉಡುಪು ಧರಿಸಿ ಬರುವಂತಿಲ್ಲ. ಬೆಲ್ಟ್, ಟೋಪಿ ಹಾಗೂ ಯಾವುದೇ ಆಭರಣ ಧರಿಸುವಂತಿಲ್ಲ (ಮಂಗಳಸೂತ್ರ ಹೊರತು ಪಡಿಸಿ). ಶೂ ಹಾಕಿಕೊಂಡು ಬರುವಂತಿಲ್ಲ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್, ಜಿಲ್ಲಾ ಎಸ್.ಪಿ. ಯಶೋಧಾ ವಂಟಗೋಡಿ, ಕೇಂದ್ರಿಯ ವಿದ್ಯಾಲಯದ ಪ್ರಾಂಶುಪಾಲ ಪಿ.ಎಸ್. ರಾಜು ಸಭೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-22-1691765442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.