ಹಾವೇರಿ: ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯ ಸಂತ್ರಸ್ತರಿಗೆ ನೆರವು ನೀಡಲು ಹಾಗೂ ಧೈರ್ಯ ಹೇಳುವುದಕ್ಕಾಗಿ ಬೆಂಬಲ ವ್ಯಕ್ತಿಗಳನ್ನು ನಿಯೋಜಿಸಲಾಗುತ್ತಿದೆ. ಈ ವ್ಯಕ್ತಿಗಳು, ಪೋಕ್ಸೊ ಕಾಯ್ದೆ ಬಗ್ಗೆ ತಿಳಿದುಕೊಂಡು ಸಂತ್ರಸ್ತರಿಗೆ ನೆರವಾಗಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪ ಎನ್. ಅವರು ಹೇಳಿದರು.

ನಗರದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಪೋಕ್ಸೊ ಸಂತ್ರಸ್ತರ ಬೆಂಬಲ ವ್ಯಕ್ತಿಗಳ ತರಬೇತಿ ಕಾರ್ಯಾಗಾರ ಹಾಗೂ ಬಾಲ್ಯ ವಿವಾಹ ನಿಷೇಧ, ವರದಕ್ಷಿಣೆ ನಿಷೇಧ, ಮಾನವ ಕಳ್ಳ ಸಾಗಾಣಿಕೆ ಜಾಗೃತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಬೆಂಬಲ ವ್ಯಕ್ತಿಗಳು, ಪೋಕ್ಸೊ ಕಾಯ್ದೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ಹೊಂದಿರಬೇಕು. ಸಂತ್ರಸ್ತರ ಪರವಾಗಿ ನಿಂತುಕೊಂಡು, ಪಟ್ಟಭದ್ರ ಹಿತಾಸಕ್ತಿಗಳು ಸಾಕ್ಷಿ ನಾಶಪಡಿಸದಂತೆ ನೋಡಿಕೊಳ್ಳಬೇಕು. ಧೈರ್ಯವಾಗಿ ಹೇಳಿಕೆ ನೀಡುವಂತೆ ಸಂತ್ರಸ್ತರಿಗೆ ತಿಳಿವಳಿಕೆ ಮೂಡಿಸಬೇಕು’ ಎಂದು ಹೇಳಿದರು.

‘ಪೋಕ್ಸೊ ಕಾಯ್ದೆಯ ಕೆಲ ಪ್ರಕರಣಗಳಲ್ಲಿ ಸಂತ್ರಸ್ತರು ಹಣದ ಆಸೆಯಿಂದ ಪ್ರಕರಣದಿಂದ ಹಿಂದೆ ಸರಿದ ಉದಾಹರಣೆಗಳಿವೆ. ಹೀಗಾಗಿ, ಪೋಕ್ಸೊ ಪ್ರಕರಣಗಳಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಬಹಳ ಮುಖ್ಯವಾಗಿದೆ. ಜೊತೆಗೆ, ಬಾಲ್ಯ ವಿವಾಹ ನಿಷೇಧ, ವರದಕ್ಷಿಣೆ, ಮಾನವ ಕಳ್ಳ ಸಾಗಾಣಿಕೆ ಕುರಿತು ಸಮಾಜದಲ್ಲಿ ಕಾನೂನಿನ ಅರಿವು ಮೂಡಿಸಿದಾಗ ಇಂತಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲು ಸಾಧ್ಯ’ ಎಂದು ತಿಳಿಸಿದರು.

‘ಪೋಕ್ಸೊ ಕಾಯ್ದೆ 2012ರ ನಿಯಮ 39ರ ಅಡಿಯಲ್ಲಿ ಸಂತ್ರಸ್ತ ಮಕ್ಕಳಿಗಾಗಿ ಬೆಂಬಲ ವ್ಯಕ್ತಿಗಳನ್ನಾಗಿ ಪಿಎಲ್ವಿ ಹಾಗೂ ಆಸಕ್ತಿ ಇರುವ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ. ನಿಮಗೆ ತರಬೇತಿ ನೀಡಿದಾಗ ಮಾತ್ರ ನೀವು ಸಂತ್ರಸ್ತರಿಗೆ ನಿಜವಾದ ಬೆಂಬಲ ನೀಡುವ ವ್ಯಕ್ತಿಗಳಾಗಲು ಸಾಧ್ಯ. ಇದೇ ಕಾರಣಕ್ಕೆ ಈ ತರಬೇತಿ ಹಮ್ಮಿಕೊಳ್ಳಲಾಗಿದೆ’ ಎಂದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಗೀತಾ ಪಾಟೀಲ ಅವರು, ‘ಪೋಕ್ಸೊ ಕಾಯ್ದೆ, ಬೆಂಬಲ ವ್ಯಕ್ತಿಗಳ ಕರ್ತವ್ಯ, ಬಾಲ್ಯ ವಿವಾಹ ನಿಷೇಧ, ವರದಕ್ಷಿಣೆ ನಿಷೇಧ, ಮಾನವ ಕಳ್ಳ ಸಾಗಾಣಿಕೆ’ ವಿಷಯದ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶರಾದ ಶ್ರೀಶೈಲಜಾ ಎಚ್.ವಿ., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-22-1360659783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.