ಹಾವೇರಿ: ‘ಶಿಕ್ಷಕ ವೃತ್ತಿ ಎಂಬುದು ಬಹಳ ಶ್ರೇಷ್ಠವಾದ ವೃತ್ತಿ. ಈ ವೃತ್ತಿ ಮಾಡುವವರು ಸಮಾಜದ ಭಾಗ್ಯವಂತರು’ ಎಂದು ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ನೆಗಳೂರ ಗ್ರಾಮದಲ್ಲಿ ಭಾನುವಾರ ಜರುಗಿದ ‘ಶಾಲಾ ಶಿಕ್ಷಕಿ ಎಸ್. ಜಿ. ಪಾಟೀಲ (ಹಿರೇಮಠ) ಅವರ ಸೇವಾ ನಿವೃತ್ತಿ ಕೃತಜ್ಞತಾ ಸಮಾರಂಭ’ದ ಸಾನ್ನಿಧ್ಯ ವಹಿಸಿ ಅವರು ಆರ್ಶೀವಚನ ನೀಡಿದರು.

‘ಎಸ್.ಜಿ. ಪಾಟೀಲ ಅವರು ಶಿಕ್ಷಕಿಯಾಗಿ 27 ವರ್ಷಗಳ ಕಾಲ ನಿಸ್ವಾರ್ಥ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ. ಅವರ ಗರಡಿಯಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದಾರೆ’ ಎಂದರು.

ಗದಿಗೆಯ್ಯ ಸ್ವಾಮಿ ಹಿರೇಮಠ ಮಾತನಾಡಿದರು.

ಕಲಬುರಗಿ, ನೆಗಳೂರ ಗ್ರಾಮಸ್ಥರು ಹಾಗೂ ಹಳೆಯ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-22-1250240557

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.