ಹಾವೇರಿ: ‘ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸಮಾರಂಭವನ್ನು ಏಪ್ರಿಲ್ 6ರಂದು ಹಮ್ಮಿಕೊಳ್ಳಲಾಗಿದ್ದು, ಶೈಕ್ಷಣಿಕ ವರ್ಷದಲ್ಲಿ ಉತ್ತಮ ಸಾಧನೆ ಮಾಡಿದ ಎಂಟು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 10 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಗುತ್ತಿದೆ’ ಎಂದು ಕುಲಪತಿ ಪ್ರೊ. ಸುರೇಶ ಎಚ್. ಜಂಗಮಶೆಟ್ಟಿ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಳೇ ಪಿ.ಬಿ. ರಸ್ತೆಯ ಗುದ್ಲೆಪ್ಪ ಹಳ್ಳಿಕೇರಿ (ಜಿ.ಎಚ್.) ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಮಾರಂಭ ಆರಂಭವಾಗಲಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಅಶೋಕ ಹಿಂಚಿಗೇರಿ ಪಾಲ್ಗೊಳ್ಳಲಿದ್ದಾರೆ’ ಎಂದರು.

‘ವಿವಿಧ ಸ್ನಾತಕೋತ್ತರ ಪದವಿ, ಬಿ.ಎಡ್ ಮತ್ತು ಬಿಪಿ.ಎಡ್ ಪದವಿಯಲ್ಲಿ ರ್ಯಾಂಕ್ ಪಡೆದ 8 ವಿದ್ಯಾರ್ಥಿಗಳಿಗೆ ಈ ಬಾರಿ ಚಿನ್ನದ ಪದಕ ನೀಡಲಾಗುತ್ತಿದೆ. 10 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಚಿನ್ನದ ಪದಕ ಹಾಗೂ ನಗದು ಪುರಸ್ಕಾರವನ್ನು ದಾನಿಗಳ ಮೂಲಕ ಪಡೆಯಲಾಗಿದೆ. ಇದು ಮೊದಲ ಘಟಿಕೋತ್ಸವವಾಗಿರುವುದರಿಂದ, ಪಿಎಚ್ಡಿ ಪದವಿ ಪಡೆದವರು ಯಾರೂ ಇಲ್ಲ’ ಎಂದು ಹೇಳಿದರು.

ಕ್ಯಾಂಪಸ್ಗೆ ರಾಜ್ಯಪಾಲರ ಭೇಟಿ:‘ಮೂರು ವರ್ಷಗಳ ಹಿಂದೆಯಷ್ಟೇಹಾವೇರಿ ವಿವಿ ಆರಂಭವಾಗಿದೆ. ಏಪ್ರಿಲ್6ರಂದು ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿರುವ ರಾಜ್ಯಪಾಲರು, ಅಂದೇ ಹಾವೇರಿ ತಾಲ್ಲೂಕಿನ ಕೆರಿಮತ್ತಿಹಳ್ಳಿಯಲ್ಲಿರುವ ವಿಶ್ವವಿದ್ಯಾಲಯದ ಕ್ಯಾಂಪಸ್ಗೆ ಭೇಟಿ ನೀಡಲಿದ್ದಾರೆ’ ಎಂದು ಸುರೇಶ ಜಂಗಮಶೆಟ್ಟಿ ತಿಳಿಸಿದರು.

‘ವಿವಿ ಆವರಣದಲ್ಲಿ ಸರಸ್ವತಿ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಅದನ್ನುರಾಜ್ಯಪಾಲರು ಲೋಕಾರ್ಪಣೆ ಮಾಡಲಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ ಅವರು, 100 ಸೀಟಿನ ಸೆಮಿನಾರ್ ಹಾಲ್ಗೆ ಅಡಿಗಲ್ಲು ನೆರವೇರಿಸಲಿದ್ದಾರೆ. ನಂತರ, ಘಟಿಕೋತ್ಸವದ ನೆನಪಿಗಾಗಿ ಕ್ಯಾಂಪಸ್ನಲ್ಲಿ ಸಸಿ ನೆಡುವ ಕಾರ್ಯಕ್ರಮವಿದೆ’ ಎಂದು ಹೇಳಿದರು.

ವಿವಿ ಕುಲಸಚಿವ ಪ್ರೊ. ಸಿದ್ದಪ್ಪ ಬಾಗಲಕೋಟಿ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-22-346205783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.