ಹಾವೇರಿ ‘ಇಡೀ ವಿಶ್ವಕ್ಕೆ ಮಾದರಿಯಾಗುವ ಸಂವಿಧಾನ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದೇಶದ ಆಹಾರ ಭದ್ರತೆಗೆ ನಾಂದಿ ಹಾಡಿದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರು, ದೇಶದ ಎರಡು ಕಣ್ಣುಗಳಿದ್ದಂತೆ. ಇಬ್ಬರೂ ಮಹಾನ್ ಚೇತನರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕ ಬದುಕು ನಮ್ಮದಾಗುತ್ತದೆ’ ಎಂದು ವಿಧಾನಸಭೆಯ ಉಪ ಸಭಾಧ್ಯಕ್ಷರೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ನಗರದ ಇಜಾರಿ ಲಕಮಾಪುರ ಬಳಿಯ ಸಿದ್ಧಾರೂಢ ಕಾಲೊನಿಯಲ್ಲಿರುವ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಪರಿಶಿಷ್ಟ ಜಾತಿ ಒಕ್ಕೂಟ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ‘ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತ್ಯುತ್ಸವ’ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ದೇಶಕ್ಕೆ ಸ್ವಾತಂತ್ರ್ಯ ಬಂದು ಎಂಟು ದಶಕವಾಗುತ್ತಿದ್ದರೂ ಇಂದಿಗೂ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಜೀವಂತವಾಗಿದೆ. ಇದು ವಿಷಾದನೀಯ. ಅಸ್ಪೃಶ್ಯತೆ ವಿರುದ್ಧ ಜಾಗೃತಿ ಅಗತ್ಯವಾಗಿದೆ. ಬಸವಣ್ಣನವರ ಕಾಲದಿಂದಲೂ ಜಾತಿ ವಿರೋಧಿ ಹೋರಾಟಗಳು ನಡೆಯುತ್ತಿವೆ. ಇಂದಿನ ಪೀಳಿಗೆಗೆ ಅದು ದಾರಿದೀಪವಾಗಬೇಕಿದೆ. ಇಂದಿನ ಯುವ ಸಮೂಹವು ‘ನಾವೆಲ್ಲರೂ ಒಂದು’ ಎಂಬ ಮನೋಭಾವದಿಂದ ಬದುಕಬೇಕು. ಜಾತಿ ಭೇದ ಮರೆತು ಮನುಷ್ಯರಂತೆ ಬದುಕುವ ಸಂಕಲ್ಪ ಮಾಡಬೇಕು’ ಎಂದರು.

ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ‘ಅಂಬೇಡ್ಕರ್ ಅವರು ಕೇವಲ ಒಬ್ಬ ವ್ಯಕ್ತಿಯಲ್ಲ. ಅವರು ಜ್ಞಾನದ ಶಕ್ತಿ. ಅಂಬೇಡ್ಕರ್ ಅವರು ಅರ್ಥಶಾಸ್ತ್ರ, ಕಾನೂನು, ಸಮಾಜ... ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಮಾಡಿದ ಸಾಧನೆ ಬೆರಗುಗೊಳಿಸುವಂತದ್ದಾಗಿದೆ’ ಎಂದರು.

‘ಇಂದು ನಾವು ಪಡೆದುಕೊಂಡಿರುವ ಸಮಾನತೆಯ ಹಕ್ಕು ಹಾಗೂ ಪ್ರಜಾಪ್ರಭುತ್ವದ ಹಕ್ಕುಗಳಿಗೆ ಅವರು ಬರೆದ ಸಂವಿಧಾನವೇ ಭದ್ರ ಬುನಾದಿಯಾಗಿದೆ. ಬಾಬು ಜಗಜೀವನರಾಂ ಅವರು ದೇಶವು ಆಹಾರ ಕೊರತೆ ಎದುರಿಸುತ್ತಿದ್ದಾಗ, ಹಸಿರು ಕ್ರಾಂತಿಯ ಮೂಲಕ ಸ್ವಾವಲಂಬನೆ ತಂದುಕೊಟ್ಟ ಧೀಮಂತ ನಾಯಕ. ಇವರಿಬ್ಬರೂ ಶೋಷಿತ ವರ್ಗದವರ ಏಳಿಗೆಗಾಗಿ ಬದುಕಿದವರು. ಶೋಷಿತರ ಏಳಿಗೆಗೆ ಶಿಕ್ಷಣವೇ ಏಕೈಕ ಅಸ್ತ್ರ ಎಂಬುದನ್ನು ಅರಿತಿದ್ದರು. ಶಿಕ್ಷಣದಿಂದ ಸಾಧಿಸಿ ತೋರಿಸಿದರು’ ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಹನುಮಂತಗೌಡ ಪಿ. ಗೊಲ್ಲರ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರ ಬದುಕು ಹಾಗೂ ಸಾಧನೆ ಕುರಿತು ಉಪನ್ಯಾಸ ನೀಡಿದರು. ಶಿಕ್ಷಕ ಮಹದೇವಪ್ಪ ಎಚ್. ಕರಿಯಣ್ಣನವರ ಅವರು, ಬಾಬು ಜಗಜೀವನರಾಂ ಅವರ ಬದುಕು ಬಗ್ಗೆ ಉಪನ್ಯಾಸ ನೀಡಿದರು.

ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜೀಗೌಡ್ರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರು, ಜಿಲ್ಲಾ ಎಸ್.ಪಿ. ಯಶೋದಾ ವಂಟಗೋಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಲ್. ನಾಗರಾಜ್, ಉಪ ವಿಭಾಗಧಿಕಾರಿ ಕಲ್ಯಾಣಿ ಕಾಂಬ್ಳೆ, ತಹಶೀಲ್ದಾರ ಕೆ. ಶರಣಮ್ಮ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಎಂ. ವರಗಪ್ಪನವರ ಇದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ಮಾಲಾರ್ಪಣೆ ಮಾಡಿದರು. ನಂತರ ಅಂಬೇಡ್ಕರ್ ಹಾಗೂ ಜಗಜೀವನರಾಂ ಅವರ ಭಾವಚಿತ್ರಗಳ ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ವಿಜೃಂಭಣೆಯಿಂದ ಸಾಗಿತು. ಬೈಕ್ ಜಾಥಾ, ರಕ್ತದಾನ ಶಿಬಿರ, ಆರೋಗ್ಯ ಉಚಿತ ತಪಾಸಣೆ, ಪುಸ್ತಕ ಪ್ರದರ್ಶನವೂ ನಡೆಯಿತು.

ಕಾಂಗ್ರೆಸ್ ಕಚೇರಿ: ಹಾವೇರಿ ಹಳೇ ಪಿ.ಬಿ.ರಸ್ತೆಯ ವಾಲ್ಮೀಕಿ ವೃತ್ತ ಬಳಿಯಿರುವ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಬಿ.ಆರ್. ಅಂಬೇಡ್ಕ್ ಹಾಗೂ ಬಾಬು ಜಗಜೀವನರಾಂ ಅವರ ಜಯಂತ್ಯುತ್ಸವವನ್ನು ಮಂಗಳವಾರ ಆಚರಿಸಲಾಯಿತು. ಇಬ್ಬರ ಭಾವಚಿತ್ರಕ್ಕೂ ಪುಷ್ಪ ನಮನ ಸಲ್ಲಿಸಲಾಯಿತು.

ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ‘ಶೋಷಿತರು, ಬಡವರು, ನೊಂದವರ ಪರವಾಗಿ ಅಂಬೇಡ್ಕರ್ ಅವರು ಹೋರಾಟ ನಡೆಸಿದ್ದರು. ಅವರು ನೀಡಿದ ಸಂವಿಧಾನದ ಮೂಲಕವೇ ಇಂದು ದೇಶ ಮುನ್ನಡೆಯುತ್ತಿದೆ. ಅವರ ಆದರ್ಶಗಳನ್ನು ಇಂದು ನಾವೆಲ್ಲರೂ ಪಾಲಿಸಬೇಕು. ನೊಂದವರು ಹಾಗೂ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸಲು ಸದಾ ಪ್ರಯತ್ನಿಸಬೇಕು’ ಎಂದರು.

ಮುಖಂಡರಾದ ನೆಹರೂ ಓಲೇಕಾರ, ಎಂ.ಎಂ. ಹಿರೇಮಠ, ಎಸ್.ಎಫ್.ಎನ್. ಗಾಜೀಗೌಡ್ರ, ಕೊಟ್ರೇಶಪ್ಪ ಬಸೇಗಣ್ಣಿ, ಶಂಕರ ಮೆಹರವಾಡೆ, ಎಂ.ಎಂ. ಮೈದೂರು, ಪ್ರಭುಗೌಡ್ರ ಭಿಷ್ಟನಗೌಡ್ರ, ದಾಸಪ್ಪ ಕರ್ಜಗಿರ, ಶಾಂತಕ್ಕ ಶಿರೂರ ಇದ್ದರು.

ಅಂಜುಮನ್ ಎ ಇಸ್ಲಾಂ ಸಂಸ್ಥೆ: ಹಾವೇರಿಯ ಅಂಜುಮನ್ ಎ ಇಸ್ಲಾಂ ಸಂಸ್ಥೆಯಿಂದ ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವವನ್ನು ಆಚರಿಸಲಾಯಿತು. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಅಧ್ಯಕ್ಷ ಇರ್ಫಾನ್ ಖಾನ್ ಪಠಾಣ, ಚಮನ್ ಶರೀಫ್ ಮುಲ್ಲಾ, ಅನ್ವರ್ ಕಡೇಮನಿ, ಜಮೀರ್ ಜಿಗರಿ, ಸಾದಿಕ ಸವಣೂರು, ಮುನ್ನ ಶಿರಸಿ, ಆದಿಲ್ ಚಲ್ಯಾಳ, ಇರ್ಷಾದ ಜಮಾದಾರ್, ಇಮ್ರಾನ್ ಹೊಂಬರಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-22-1276343801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.