ಹಾವೇರಿ: ‘ಇಂದಿನ ದಿನಮಾನಗಳಲ್ಲಿ ಮಹಿಳೆಯರು ಶಿಕ್ಷಣವಂತರಾಗುತ್ತಿದ್ದಾರೆ. ಸಮಾಜದ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ’ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

ನಗರದ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘2025–26ನೇ ಶೈಕ್ಷಣೆಕ ಸಾಲಿನ ಸಾಂಸ್ಕೃತಿಕ ಕ್ರೀಡಾ, ಯೂಥ್ ರೆಡ್ ಕ್ರಾಸ್ ಹಾಗೂ ಎನ್.ಎಸ್.ಎಸ್. ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರೇವತಿ ಎಸ್. ಹೊಸಮಠ ಮಾತನಾಡಿ, ‘ವಿದ್ಯಾರ್ಥಿನಿಯರು ಉನ್ನತ ಶಿಕ್ಷಣದೊಂದಿಗೆ ವೃತ್ತಿಗೆ ಅನುಸಾರ ಕುಶಲಗಳನ್ನು ಬೆಳೆಸಿಕೊಳ್ಳಬೇಕು. ತೊಟ್ಟಿಲು ತೂಗುವ ಕೈ ಜಗತ್ತನ್ನು ಆಳಬಲ್ಲದು ಎಂಬುದನ್ನು ಸಾಧಿಸಿ ತೋರಿಸಬೇಕು’ ಎಂದರು.

ಶಿವಲಿಂಗೇಶ್ವರ ವಿದ್ಯಾಪೀಠದ ಕಾರ್ಯಾಧ್ಯಕ್ಷ ಎಸ್.ಎಸ್. ಮುಷ್ಠಿ ಅವರು ಅಧ್ಯಕ್ಷತೆ ವಹಿಸಿದ್ದರು. ಗೌರವ ಉಪಾಧ್ಯಕ್ಷ ವೀರಣ್ಣ ಅಂಗಡಿ, ಮಹೇಶ ಚಿನ್ನಿಕಟ್ಟಿ, ಪ್ರಾಂಶುಪಾಲರಾದ ಸವಿತಾ ಎಸ್. ಹಿರೇಮಠ, ಬಿ.ವಿ ಹಿರೇಮಠ, ಟಿ.ಎನ್. ಮಡಿವಾಳರ, ವಿ.ಕೆ. ಹಲಗಣ್ಣನವರ, ನಾಗರಾಜ ಎಂ.ಎಚ್ ಹಾಗೂ ಇತರರು ಇದ್ದರು.

ಬಿ.ಎ. ಮತ್ತು ಬಿ.ಕಾಂ. ವಿಭಾಗದಿಂದ ಕ್ರಮವಾಗಿ ಪೂರ್ಣಿಮಾ ಕರ್ಜಗಿ ಮತ್ತು ಸುಶ್ಮಿತಾ ಕಾಯಕದ ಅವರು 2025–26ನೇ ಸಾಲಿನ ಆದರ್ಶ ವಿದ್ಯಾರ್ಥಿನಿ ಬಹುಮಾನ ಪಡೆದುಕೊಂಡರು. ಚಂದ್ರಕಲಾ ನಾಗನೂರ ಸಮಗ್ರ ವೀರಾಗ್ರಣಿ ಪಡೆದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-22-1607079784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.