ಎಚ್.ಡಿ.ಕೋಟೆ: ‘ಸಾವಿತ್ರಿಬಾಯಿ ಫುಲೆ ಅವರು ರಾಷ್ಟ್ರದ ಮೊದಲ ಮಹಿಳಾ ಶಿಕ್ಷಕಿಯಾಗಿ, ಮಹಿಳೆಯರಿಗೆ ಶಿಕ್ಷಣ ನೀಡಿದರು. ಅದರಂತೆ ಇಂದಿನ ಶಿಕ್ಷಕಿಯರು ಹೆಣ್ಣು ಮಕ್ಕಳು ಶಾಲೆ ಬಿಡದಂತೆ ನೋಡಿಕೊಳ್ಳಬೇಕು’ ಎಂದು ಸೌಮ್ಯ ಅನಿಲ್ ಚಿಕ್ಕಮಾದು ಸಲಹೆ ನೀಡಿದರು.

ಪಟ್ಟಣದಲ್ಲಿ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್, ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾ ಮತ್ತು ತಾಲ್ಲೂಕು ಘಟಕದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ‘ಮಹಿಳಾ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಾವಿತ್ರಿಬಾಯಿ ಫುಲೆ ಅವರು ಶಾಲೆ ಬಿಟ್ಟ ಮಕ್ಕಳಿಗೆ ಮತ್ತೆ ಓದಲು ಅವಕಾಶವನ್ನು ಕಲ್ಪಿಸಿಕೊಟ್ಟಿದ್ದರು. ಅವರು ಅಂದು ಶಾಲೆ ಬಿಟ್ಟ ಮಕ್ಕಳಿಗೆ ಶಾಲೆ ಕಟ್ಟಿದಂತೆ ಇಂದಿನ ಶಿಕ್ಷಕಿಯರು ಶಾಲೆ ಬಿಟ್ಟ ಮಕ್ಕಳು ಮತ್ತೆ ಶಾಲೆಗೆ ಬರುವಂತೆ ನೋಡಿಕೊಳ್ಳಬೇಕು. ಶೂನ್ಯ ದಾಖಲಾತಿ ಇರುವ ಶಾಲೆಗಳಿಗೆ ಮತ್ತೆ ದಾಖಲಾತಿ ಆಗುವ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಲ್. ರಾಜು, ‘ತಾಲ್ಲೂಕಿನಲ್ಲಿ ಒಟ್ಟು 350 ಅತಿಥಿ ಶಿಕ್ಷಕರಿದ್ದಾರೆ. ಕಾಯಂ ಶಿಕ್ಷಕರ ಕೊರತೆಯಿಂದಾಗಿ 53 ಶಾಲೆಗಳಲ್ಲಿ ಅತಿಥಿ ಶಿಕ್ಷಕರೇ ಶಾಲೆಗಳನ್ನು ನಡೆಸಿಕೊಂಡು ಹೋಗುವ ಸ್ಥಿತಿ ಇದೆ. ಅಂತಹ ಶಿಕ್ಷಕರನ್ನು ಅಭಿನಂದಿಸಲಾಗಿದೆ' ಎಂದರು.

ಸಂಘದ ಅಧ್ಯಕ್ಷೆ ಎಲ್.ಕೆ. ರೂಪ ಪ್ರಮೋದ್, ‘ಮಹಿಳೆಯರ ಮೇಲೆ ದೌರ್ಜನ್ಯ ಇಂದಿಗೂ ನಡೆಯುತ್ತಿದೆ. ದೌರ್ಜನ್ಯದ ಸ್ವರೂಪ ಬದಲಾಗಿದೆಯೇ ಹೊರತು, ದೌರ್ಜನ್ಯ ನಿಂತಿಲ್ಲ’ ಎಂದು ಬೇಸರಿಸಿದರು.

ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರೇ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ನೀಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ವಿವಿಧ ಶಾಲೆಗಳಲ್ಲಿ ಸಾಧನೆ ತೋರಿದ ಮಹಿಳಾ ಶಿಕ್ಷಕಿಯರಿಗೆ ‘ಮಹಿಳಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮನ್ವಯಾಧಿಕಾರಿ ಕೃಷ್ಣಯ್ಯ ಮಾತನಾಡಿದರು.

ಭೀಮಪ್ಪ, ಸೌಮ್ಯ ಮಂಜುನಾಥ್, ಜಿಲ್ಲಾ ಅಧ್ಯಕ್ಷೆ ಸರಸ್ವತಮ್ಮ, ಸಹ ಕಾರ್ಯದರ್ಶಿ ರೇಖಾ, ಜಸ್ಸೀಲಾ, ಮಂಜುನಾಥ್, ಸಿಆರ್ಪಿ ನಂಜುಂಡಯ್ಯ, ಲೇಪಾಕ್ಷಿ, ಪ್ರಮೋದ್, ಯಶವಂತ್, ಪ್ರಶಾಂತ್, ಲಿಂಗರಾಜು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-38-875751572

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.