ಹೆಬ್ರಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ಹೆಬ್ಬೇರಿ ವೈಬ್ಸ್’ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಸುನಿಲ್ ಕುಮಾರ್, ‘ಸರ್ಕಾರಿ ಕಾಲೇಜಿನಲ್ಲಿ ಇಂತಹ ದೊಡ್ಡ ಕಾರ್ಯಕ್ರಮ ಆಯೋಜಿಸಿರುವುದು ಪ್ರಶಂಸನೀಯ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಹಾಗೂ ಕೌಶಲ ರೂಪುಗೊಳ್ಳಲು ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ’ ಎಂದರು.

ಉದ್ಯಮಿ ಸತೀಶ್ ಪೈ ಅವರು, ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ವ್ಯಕ್ತಿತ್ವದ ಮಹತ್ವವನ್ನು ಮನವರಿಕೆ ಮಾಡಿದರು.

ಕಾಲೇಜಿನ ಪ್ರಾಂಶುಪಾಲ ವಿದ್ಯಾಧರ ಹೆಗ್ಡೆ ಎಸ್. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಷ್ಮಾ ರಾವ್ ಕೆ., ಐಕ್ಯುಎಸಿ ಸಂಚಾಲಕ ಗಣೇಶ್ ಎಸ್., ಸ್ಪರ್ಧೆಗಳ ಸಹ ಸಂಚಾಲಕ ಪದ್ಮನಾಭ ಶೆಟ್ಟಿ, ವಿದ್ಯಾರ್ಥಿ ನಾಯಕರಾದ ಅನಿಲ್, ಅಂಕಿತ, ಸ್ನೇಹ ಇದ್ದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಊರಿನ ಗಣ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಸಂಚಾಲಕ ಸುಧೀರ್ ಜೈನ್ ಎಂ.ಎಸ್. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕಿ ಮಮತಾ ವಂದಿಸಿದರು. ವಿದ್ಯಾರ್ಥಿನಿ ಪವಿತ್ರ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-28-311356116

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.