ಹೆಬ್ರಿ: ತಾಲ್ಲೂಕಿನ ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇನಲ್ಲಿ ಈಚೆಗೆ ಯುವ ರೆಡ್ಕ್ರಾಸ್ ಘಟಕ, ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ ಕಾರ್ಕಳ, ಮುನಿಯಾಲು ಲಯನ್ಸ್ ಕ್ಲಬ್ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು.

ಶಿಬಿರ ಉದ್ಘಾಟಿಸಿದ ಜಿಲ್ಲಾ ರಕ್ತನಿಧಿ ಘಟಕದ ಮುಖ್ಯಸ್ಥೆ ಡಾ. ವೀಣಾ ಮಾತನಾಡಿ, ರಕ್ತದಾನ ಮಾಡುವುದರಿಂದ ಜೀವ ಉಳಿಸಬಹುದು. ರಕ್ತದಾನದಿಂದ ದೇಹ ಪರಿಶುದ್ಧಗೊಳ್ಳುತ್ತದೆ, ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಕೆ.ಜಿ. ಸುಧಾಕರ್ ಅವರು, ವೈಯಕ್ತಿಕ, ಸಾಮಾಜಿಕ ಆರೋಗ್ಯದ ದೃಷ್ಟಿಯಿಂದ ಯುವ ಸಮುದಾಯ ರಕ್ತದಾನ ಮಾಡುವುದು ಒಳ್ಳೆಯದು ಎಂದರು.

25 ಯುನಿಟ್ ರಕ್ತ ಸಂಗ್ರಹವಾಯಿತು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಗೋಪಿನಾಥ ಭಟ್ ಸ್ವಾಗತಿಸಿದರು. ಸಮಾಜಶಾಸ್ತ್ರ ಮುಖ್ಯಸ್ಥ ಮಂಜುನಾಥ ಆಚಾರಿ ನಿರೂಪಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-28-1412922169

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.