ಹೆಬ್ರಿ: ಪಡುಕುಡೂರು ಶಾಲೆಯಲ್ಲಿ ಶಿಕ್ಷಕಿ ವೃತ್ತಿ ಪ್ರಾರಂಭಿಸಿ, 31 ವರ್ಷ ಶಿರ್ಲಾಲು ಸೂಡಿ, ಅಜೆಕಾರು ಕಿರೆಂಚಿಬೈಲು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ, ಪಡಕುಡೂರು ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ನಿವೃತ್ತರಾದ ಊರ್ಮಿಳಾ ಕುಮಾರಿ ಅವರನ್ನು ಶಾಲೆಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.

ಸೇವೆಗೆ ಸೇರಿದ ಪಡುಕುಡೂರು ಶಾಲೆಯಲ್ಲೇ ನಿವೃತ್ತಿಯಾಗುವ ಕ್ಷಣವನ್ನು ಊರ್ಮಿಳಾ ಕುಮಾರಿ ಸ್ಮರಿಸಿದರು. ನೆನಪಿಗಾಗಿ ಶಾಲೆಗೆ ನೆರವು ನೀಡಿದರು.

ಎಲ್ಕೆಜಿ, ಯುಕೆಜಿ ತರಗತಿಗಳ ಆರಂಭ, ಶಿಕ್ಷಕರು, ಪೋಷಕರು, ಎಸ್ಡಿಎಂಸಿ ಸದಸ್ಯರ ಮಹಾಸಭೆ, ಸಂವಾದ ಹಾಗೂ ಶಾಲೆ ಅಭಿವೃದ್ಧಿ ಕುರಿತು ಚರ್ಚೆ ನಡೆದವು.

ಸರ್ಕಾರ ಹಾಗೂ ದಾನಿಗಳು ನೀಡಿದ ಸಮವಸ್ತ್ರ, ಪಠ್ಯಪುಸ್ತಕ, ಹಾಗೂ ನೋಟ್ ಪುಸ್ತಕ ವಿತರಣೆ ನಡೆಯಿತು. ‘ಉತ್ತಮ ಕಲಿಕೆ - ಉಜ್ವಲ ಭವಿಷ್ಯ’ ಕಾರ್ಯಕ್ರಮದ ಅನುಷ್ಠಾನ ಹಾಗೂ ದ್ವಿಭಾಷಾ ಮಾಧ್ಯಮ ಶಿಕ್ಷಣದ ಬಗ್ಗೆ ವಿಚಾರ ವಿನಿಮಯ, ಶತಮಾನೋತ್ಸವದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಮಾಲೋಚನೆ ನಡೆಯಿತು.

ದಾನಿ ವಸಂತ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ, ಮುಖ್ಯ ಶಿಕ್ಷಕ ಹರೀಶ ಪೂಜಾರಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಹರೀಶ ಪೂಜಾರಿ, ಚಿಕ್ಕಮಾರಬೆಟ್ಟು ಚಂದ್ರಶೇಖರ ಶೆಟ್ಟಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷ ಹೃದಯ ಕುಮಾರ್ ಶೆಟ್ಟಿ, ಸೇವಾ ಪ್ರತಿನಿಧಿ ಚಿತ್ರಾ, ಅಂಗನವಾಡಿ ಶಿಕ್ಷಕಿ ಸವಿತಾ ಶೆಟ್ಟಿ, ಬಾಲ ವಿಕಾಸ ಸಮಿತಿಯ ಸರಿತಾ, ಪತ್ರಕರ್ತ ಸುಕುಮಾರ್ ಆಚಾರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಹರೀಶ ಪೂಜಾರಿ ಅಭಿನಂದನಾ ಭಾಷಣ ಮಾಡಿದರು. ಶಿಕ್ಷಕಿಯರಾದ ಶೋಭಾ ನಾಯ್ಕ್ ನಿರೂಪಿಸಿದರು. ಶ್ರುತಿ ಸ್ವಾಗತಿಸಿದರು. ಶ್ರುತಿ ಮೇಲ್ಮನೆ ಸನ್ಮಾನ ಪತ್ರ ವಾಚಿಸಿದರು. ಶಾಲಿನಿ ಸುಕುಮಾರ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-100094902

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.