ಹೆಬ್ರಿ: ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ), ಕೃತಕ ಬುದ್ಧಿಮತ್ತೆಯಂತಹ ಶಿಕ್ಷಣ ವ್ಯವಸ್ಥೆಗೆ ನಮ್ಮನ್ನು ನಾವು ತೆರೆದುಕೊಳ್ಳಬೇಕಾದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸಿಬಿಎಸ್ಇ ವತಿಯಿಂದ ನಡೆಯುವ ತರಬೇತಿಗಳು ಶಿಕ್ಷಣ ಸಂಸ್ಥೆಗೆ ಅಗತ್ಯ ಎಂದು ಹೆಬ್ರಿ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಎಚ್. ಯತಿರಾಜ್ ಶೆಟ್ಟಿ ಹೇಳಿದರು.

ಸಿಬಿಎಸ್ಇ ಬೋರ್ಡ್ನ ಸೆಂಟರ್ ಆಫ್ ಎಕ್ಸಲೆನ್ಸಿ ಬೆಂಗಳೂರು ಮತ್ತು ಹೆಬ್ರಿಯ ಎಸ್.ಆರ್ ಪಬ್ಲಿಕ್ ಸ್ಕೂಲ್ ಆಶ್ರಯದಲ್ಲಿ ನಡೆದ ಎರಡು ದಿನಗಳ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲ ಮಾಧವ ಕೃಪಾ ಸ್ಕೂಲ್ ಪ್ರಾಂಶುಪಾಲೆ ಸ್ವಾತಿ ಕುಲಕರ್ಣಿ, ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ಶಿಕ್ಷಕಿ ನವ್ಯಾ ಜಿ.ಕೆ ಭಾಗವಹಿಸಿದ್ದರು. ಹೆಬ್ರಿ ಎಸ್.ಆರ್. ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್, ಕಾರ್ಯಕ್ರಮದ ಸಂಯೋಜಕ ಗೋಪಾಲಾಚಾರ್ಯ ಉಪಸ್ಥಿತರಿದ್ದರು. ವಿವಿಧೆಡೆಯ 60 ಮಂದಿ ಶಿಕ್ಷಕರು ಭಾಗವಹಿಸಿದ್ದರು.ಶಿಕ್ಷಕಿ ಸುಪ್ರೀತಾ ನಿರೂಪಿಸಿದರು. ನಿವೇದಿತಾ ಸ್ವಾಗತಿಸಿದರು. ಶಕುಂತಲಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-28-649439019

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.