ಹೆಬ್ರಿ: ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಮಾನವಿಕ ವಿಭಾಗಗಳ ವತಿಯಿಂದ ‘ಡಿಜಿಟಲ್ ನೆಟ್ವರ್ಕ್ ಜಗತ್ತಿನಲ್ಲಿ ಮಾನವಿಕತೆ ಪುನರ್ ಕಲ್ಪಿಸಿಕೊಳ್ಳುವಿಕೆ’ ಕುರಿತ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.

ನಿವೃತ್ತ ಸಹ ಪ್ರಾಧ್ಯಾಪಕ ಗಣೇಶ ಪೈ ಕಾರ್ಯಾಗಾರ ಉದ್ಘಾಟಿಸಿ, ಮಾನವಿಕ ನಿಕಾಯಗಳು ತಮ್ಮ ಅಧ್ಯಯನ ಕ್ಷೇತ್ರದಲ್ಲಿ ಆಧುನಿಕ ಮಾಹಿತಿ ತಂತ್ರಜ್ಞಾನ ಅಳವಡಿಸಿಕೊಳ್ಳುವುದರೊಂದಿಗೆ ವಿಷಯವನ್ನು ಹೆಚ್ಚು ಆಕರ್ಷಕವಾಗಿಸಿ, ವಿದ್ಯಾರ್ಥಿಗಳನ್ನು ಸೆಳೆಯಬೇಕು. ಆ ಮೂಲಕ ಸಮಾಜ ವಿಜ್ಞಾನ ವಿಷಯಗಳು ಪ್ರಸ್ತುತತೆ ಕಾಯ್ದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸುಧಾಕರ ಕೆ.ಜಿ., ಇಂತಹ ಕಾರ್ಯಾಗಾರಗಳು ಪದವಿ ಹಂತದ ವಿದ್ಯಾರ್ಥಿಗಳಲ್ಲಿ ನಿರಂತರ ಕಲಿಕೆ ಜೊತೆಗೆ ಸಂಶೋಧನೆಯತ್ತ ಆಸಕ್ತಿ ಮೂಡುವಂತೆ ಮಾಡುತ್ತವೆ ಎಂದರು.

ಉಡುಪಿ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಮಾಜ ಶಾಸ್ತ್ರ ಸಹ ಪ್ರಾಧ್ಯಾಪಕ ರಾಜೇಂದ್ರ ಕೆ, ಸಾಮಾಜಿಕ ಬದಲಾವಣೆ ಮತ್ತು ಡಿಜಿಟಲ್ ಸಮಾಜ ಕುರಿತು, ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪದ್ಮನಾಭ ಶೆಟ್ಟಿ, ಡಿಜಿಟಲ್ ಆರ್ಥಿಕತೆ ಕುರಿತು ಉಪನ್ಯಾಸ ನೀಡಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಶ್ವೇಶ್ವರ ಎನ್. ಗಾಂವ್ಕರ್, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಅಕ್ಷತಾ, ದೈಹಿಕ ಶಿಕ್ಷಣ ನಿರ್ದೇಶಕಿ ಸೌಮ್ಯಾ, ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಆನಂದ ಕುಮಾರ್ ಜಿ, ಕನ್ನಡ ಸಹಾಯಕ ಪ್ರಾಧ್ಯಾಪಕ ದೇವರಾಜು ಕೆ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕಿ ಜೈಬುನ್ನೀಸಾ ಅಬ್ದುಲ್ ರಜಾಕ್ ಹಮ್ಮಬ್ಬ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜಶಾಸ್ತ್ರ ಸಹ ಪ್ರಾಧ್ಯಾಪಕ ಮಂಜುನಾಥ ಆಚಾರಿ ಮತ್ತು ಅರ್ಥಶಾಸ್ತ್ರ ಉಪನ್ಯಾಸಕಿ ಆಶಾ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಬಿಂದು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ವಿದ್ಯಾ ನಾಯಕ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-28-1301769703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.