ಹೆತ್ತೂರು: ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೆ ಭಾಷೆ, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ ತಿಳಿಸಿದರು.

ಹೆತ್ತೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕದ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕನ್ನಡ ವಿಷಯದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಶನಿವಾರ ಬೆಳೆಗಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮದನ್ ಗೌಡ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೆ.ಆರ್ ಕೆಂಚೇಗೌಡ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಪಡೆದ 19 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಜ್ಯ ಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ದಲಿತ ಮುಖಂಡ ಎಚ್.ಎನ್. ಅಣ್ಣಯ್ಯ ಹಾಗೂ 32 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುತ್ತಿರುವ ದೇವಕಿ ಎಂ.ಎಸ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯದರ್ಶಿ ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಹೇಮಂತ್ ಕುಮಾರ್ ನಿರೂಪಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ, ಕೆಪಿಎಸ್ ಶಾಲೆ ಪ್ರಾಂಶುಪಾಲ ಮಂಜುನಾಥ್, ಉಪ ಪ್ರಾಂಶುಪಾಲ ಭಾಸ್ಕರ್, ಮುಖ್ಯ ಶಿಕ್ಷಕ ಸತೀಶ್, ಮಲೆನಾಡು ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಡಾ. ಸಾಗರ್ ಜಾನೆಕೆರೆ, ಸಮಾಜಸೇವಕ ಎಚ್.ವಿ. ಸೋಮಶೇಖರ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಇ. ನಾಗಭೂಷಣ, ರಾಜ್ಯ ಕಾರ್ಮಿಕ ಘಟಕದ ಸದಸ್ಯ ಬಿ.ಟಿ. ವಿಜಯ್ ಕುಮಾರ್, ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಎಚ್.ಜಿ. ದೇವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಜ್ಮ ರಿಜ್ಮಿ ಸುದರ್ಶನ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗಭೂಷಣ್, ಹೆತ್ತೂರು ಒಕ್ಕಲಿಗರ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಎಚ್.ಜಿ,ಕಸಾಪ ಕಾರ್ಯದರ್ಶಿ ರೇಷ್ಮೆ, ನಿರ್ದೇಶಕರಾದ ಪ್ರವೀಣ್, ಮುರಳಿ, ಜಗನಾಥ, ಅರವಿಂದ,ಶೋಭ ಸತೀಶ್,ಎಚ್.ಆರ್.ಜಗದೀಶ್, ಸುಬ್ರಹ್ಮಣ್ಯ, ವೈಶಾಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-36-481848341

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.