ಹಿರೇಕೆರೂರ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವ ಮೂಲಕ ಅವರಿಗೆ ಉತ್ತಮ ಶಿಕ್ಷಣಕ್ಕಾಗಿ ಪ್ರೋತ್ಸಾಹ ನೀಡುವುದು ಅವಶ್ಯ ಎಂದು ಮಾರುತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಈರಪ್ಪ ಗೋಣಿಮಠ ಹೇಳಿದರು.

ತಾಲ್ಲೂಕಿನ ಕೋಡ ಗ್ರಾಮದ ಆಂಜನೇಯ ದೇವಸ್ಥಾನದ ಸಭಾಭವನದಲ್ಲಿ ಗ್ರಾಮದ ಮಾರುತಿ ವಿದ್ಯಾವರ್ಧಕ ಸಂಘದ ಫ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವತಿಯಿಂದ ಸಂಸ್ಥೆಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿ ಮತ್ತು ಅವರ ಪೋಷಕರಿಗೆ ಈಚೆಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಣ ವ್ಯವಸ್ಥೆ ಇತ್ತೀಚಿನ ದಿನಗಳಲ್ಲಿ ತುಂಬಾ ದುಬಾರಿಯಾಗುತ್ತಿದೆ. ಅದರಲ್ಲೂ ಮಧ್ಯಮ, ಕೆಳಮಧ್ಯಮ ವರ್ಗದ ಪಾಲಕರಿಗಂತೂ ಮಕ್ಕಳ ಶಿಕ್ಷಣಕ್ಕೆ ತುಂಬಾ ಕಷ್ಟವೆನಿಸುತ್ತಿದೆ. ಆದ್ದರಿಂದ ಪ್ರಸಕ್ತ ವರ್ಷ ಸಂಘದ ಫ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶವಾದ ಪ್ರಯುಕ್ತ ಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು ಎಂದರು.

ವಿದ್ಯಾರ್ಥಿ ಜೀವನದ ಕ್ಷಣಗಳು ಅತಿ ಅಮೂಲ್ಯವಾದದ್ದು, ಕಲಿಯಬೇಕೆಂಬ ಹಂಬಲ ವಿದ್ಯಾರ್ಥಿಗಳಲ್ಲಿರಬೇಕು. ಅಂದಾಗ ಏನನ್ನಾದರೂ ಸಾಧಿಸಬೇಕೆಂಬ ಛಲ ಬೆಳೆಯುತ್ತದೆ. ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ಅವರು ಕಲಿಯುತ್ತಿರುವ ಸಂಸ್ಥೆ ಮತ್ತು ಶಿಕ್ಷಕರು ಹಾಗೂ ಅವರಲ್ಲಿರುವ ಉತ್ತಮ ಹವ್ಯಾಸಗಳು ಮುಖ್ಯ ಎಂದು ಹೇಳಿದರು.

ಮುಂದಿನ ವಿದ್ಯಾಭ್ಯಾಸ ಉತ್ತಮವಾಗಿರಲಿ ಎಂದು ಹಾರೈಸಿ ವಿದ್ಯಾರ್ಥಿಗಳು ಮುಂಬರುವ ದಿನಗಳಲ್ಲಿ ದೇಶದ ಅತ್ಯುನತ ಹುದ್ದೆಗೆ ಆಯ್ಕೆಯಾಗುವ ಮೂಲಕ ಕೀರ್ತಿಯನ್ನು ಹೆಚ್ಚಿಸುವಂತೆ ವಿದ್ಯಾರ್ಥಿಗಳಿಗೆ ಅವರು ಹೇಳಿದರು.

ಮಾರುತಿ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಶಿವಾನಂದ ಕಬ್ಬಕ್ಕಿ , ಮುಖ್ಯ ಶಿಕ್ಷಕ ಮೂರ್ತಿನಾಯ್ಕ , ಹನುಮಗೌಡ ಕಿರವಾಡಿ , ಹುಚ್ಚಪ್ಪ ಚೌಟಿ , ಗೋಣೇಪ್ಪ ಸಣ್ಣಿಂಗಣ್ಣರ , ಸುರೇಶ ಹಾರ್ನಳ್ಳಿ , ಹನುಮಂತಪ್ಪ ಶಂಕರನಳ್ಳಿ , ರವಿಕುಮಾರ ಚವ್ಹಾಣ , ಗೋದಾವರಿ ಒಲೇಕಾರ , ರಾಜು ನರಸಾಪುರ , ಮತ್ತು ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-22-2047112504

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.