ಹಿರೇಕೆರೂರ: ಬೆಂಗಳೂರಿನ ಡಿಎಸ್ಇಆರ್ಟಿ ನಿರ್ದೇಶನದಂತೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಭಾಷಾ ಪ್ರೌಢಿಮೆ ಹೆಚ್ಚಿಸುವ ಉದ್ದೇಶದಿಂದ 1ರಿಂದ 5ನೇ ತರಗತಿ ವಿಷಯದ ಶಿಕ್ಷಕರಿಗೆ ಏ.14 ರವರೆಗೆ ದ್ವಿಭಾಷಾ ಮಾಧ್ಯಮ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ (ಅಭಿವೃದ್ಧಿ) ಝೆಡ್.ಎಂ. ಖಾಜಿ ಹೇಳಿದರು.

ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಶುಕ್ರವಾರ ಡಯಟ್, ಬಿ.ಇ.ಓ, ಬಿಆರ್ಸಿ ಕಚೇರಿ ಸಹಯೋಗದಲ್ಲಿ ದ್ವಿಭಾಷಾ ತರಗತಿ ಬೋಧನೆ ಕುರಿತು ತಾಲ್ಲೂಕಿನ 1 ರಿಂದ 5ನೇ ತರಗತಿಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರು ಧನಾತ್ಮಕ ಚಿಂತನೆ ರೂಢಿಸಿಕೊಂಡಾಗ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂ ದರು.

ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ್, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಆರ್.ತೆವರಿ ಮಾತನಾಡಿದರು.ಶಿಕ್ಷಣ ಇಲಾಖೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ, ಬಿ.ಆರ್.ಪಿ ಮತ್ತು ಸಿ.ಆರ್.ಪಿ ಗಳಾಗಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ನಾಡ ಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ತಾಲ್ಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದ ಪ್ರಬಂಧ, ರಸಪ್ರಶ್ನೆ, ಆಶು ಭಾಷಣ, ಚಿತ್ರಕಲಾ ಸ್ಪರ್ಧೆಗಳನ್ನು 2025ರ ಮೇ ತಿಂಗಳಿನಲ್ಲಿ ಆಯೋಜಿಸಲಾಗಿತ್ತು. ಆ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಚ್.ಎಚ್. ಜಾಡರ, ಬಿ.ಆರ್.ಪಿ ರವಿಕುಮಾರ ನಾಯಕ, ಬಸವರಾಜ ಲಮಾಣಿ, ಎನ್.ಸುರೇಶಕುಮಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-22-1621544166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.