ಹಿರೇಕೆರೂರ: ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವೆನ್ನುವ ಉದ್ದೇಶದಿಂದ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ತಾಲ್ಲೂಕಿನ ನೀಡನೇಗಿಲು ಗ್ರಾಮದಲ್ಲಿ ಸೋಮವಾರ ಸಂಸತ್ ಸದಸ್ಯರಾದ ಜೈರಾಮ್ ರಮೇಶ ಅವರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಣ ಅತ್ಯವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದು ಅತ್ಯವಶ್ಯಕವಾಗಿದೆ ಎಂದು ಅವರು ಹೇಳಿದರು.

ತಾಲ್ಲೂಕಿನ ಹೋಸವೀರಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ನೂತನ ಕೊಠಡಿ ಮತ್ತು ತಾವರಗಿ ಗ್ರಾಮದ 2 ನೂತನ ಶಾಲಾ ಕೊಠಡಿಗಳನ್ನು ಕೂಡ ಉದ್ಘಾಟಿಸಲಾಯಿತು.

ನೀಡನೇಗಿಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಮಹೇಶ ಗಿರಿಯಾಳ, ಉಪಾಧ್ಯಕ್ಷೆ ಸುಮಿತ್ರಾ ಲಮಾಣಿ, ಸುರೇಶನಾಯ್ಕ ಲಮಾಣಿ, ಗುರುಬಸಪ್ಪ ಗೌಡ್ರು, ಮಾಲತೇಶ ಲಮಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಶ್ರೀಧರ, ಕ್ಷೇತ್ರ ಸಮನ್ವಯಾಧಿಕಾರಿ ಬಸವರಾಜ ತೆವರಿ, ಶಾಲಾ ಮುಖ್ಯೋಪಾಧ್ಯಾಯ ರಾಘವೇಂದ್ರ ಹಂಚಿನಮನಿ, ತಾವರಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಸಿದ್ದನಗೌಡ ಮುದಿಗೌಡ್ರ, ಹೋಸವೀರಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಪ್ಪ ಗಂಗಾಪುರ, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರಡಿಕಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-22-1851731018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.