ಹಿರೀಸಾವೆ: ಸರ್ಕಾರದಿಂದ ನೀಡಿರುವ ಎಲ್ಲಾ ಅನುದಾನವನ್ನು ಗುಣಮಟ್ಟದ ಶಿಕ್ಷಣಕ್ಕೆ ನಿಯಮಾನುಸಾರು ಬಳಸಬೇಕು ಎಂದು ಕೇಂದ್ರ ಸರ್ಕಾರದ ನಿಯೋಜಿತ ಜಂಟಿ ಕಾರ್ಯದರ್ಶಿ ರಿಚಾ ಖೋಡಾ ಗುರುವಾರ ಹೇಳಿದರು.

ಇಲ್ಲಿನ ಪಿಎಂಶ್ರೀ ಶಾಸಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ಮಂದಿನ ಶೈಕ್ಷಣಿಕ ವರ್ಷದಲ್ಲಿ ಪಿಎಂಶ್ರೀ ಶಾಲೆಗಳಿಗೆ ಹೆಚ್ಚಿನ ಮೂಲಸೌಲಭ್ಯಗಳನ್ನು ಒದಗಿಸಲಾಗುವುದು. ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಶಿಕ್ಷಕರು ಮತ್ತು ಇಲಾಖೆಯ ಅಧಿಕಾರಿಗಳು ಹೆಚ್ಚಿನ ಗಮನ ನೀಡಬೇಕು, ಈ ಶಾಲೆಗೆ ಅಗತ್ಯ ಇರುವ ಕಂಪ್ಯೂಟರ್ ಶಿಕ್ಷಣಕ್ಕೆ ಅಗತ್ಯ ಇರುವ ಪರಿಕರಗಳನ್ನು ಮತ್ತು ಶುದ್ಧ ಕಡಿಯವ ನೀರಿನ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ಒದಗಿಸುವುದಾಗಿ ಹೇಳಿದರು.

ಶಾಲೆಗೆ ಆಗಮಿಸಿದ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ದೀಪಾ ಮತ್ತು ಶಾಲೆಯ ಮುಖ್ಯಶಿಕ್ಷಕಿ ಉಮಾದೇವರಾಜು ಸ್ವಾಗತಿಸಿದರು. ವಿದ್ಯಾರ್ಥಿಗಳ ಜೊತೆಯಲ್ಲಿ ಕೋಲಾಟಕ್ಕೆ ರೀಚಾ ಖೋಡಾ ಸೇರಿ ಅಧಿಕಾರಿಗಳು ಹೆಜ್ಜೆ ಹಾಕಿದರು. ಶಿಕ್ಷಕರ ಚಟುವಟಿಕಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆಯಲ್ಲಿನ ಪಿಎಂಶ್ರೀ ಯೋಜನೆಯ ಅನುದಾನದಲ್ಲಿ ಬಂದಿರುವ ಪರಿಕರಗಳನ್ನು ಮತ್ತು ಬಳಕೆಯನ್ನು ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರ ಸಭೆ ನಡೆಸಿ, ಹಲವು ಮಾಹಿತಿ ಪಡೆದು, ಕೆಲ ಮಾರ್ಗದರ್ಶನವನ್ನು ಅವರು ನೀಡಿದರು.

ರಾಜ್ಯ ಸಮಗ್ರ ಶಿಕ್ಷಣ ಕಾರ್ಯಕ್ರಮದ ಹಿರಿಯ ಅಧಿಕಾರಿ ಶಶಿಕಲಾ, ಡಿಡಿಪಿಐ ಕಚೇರಿಯ ಅಧಿಕಾರಿ ರಮೇಶ್, ಬಿಆರ್ಸಿ ಅನಿಲ್, ಶಿಕ್ಷಣ ಸಂಯೋಜಕರಾದ ಶ್ರೀನಿವಾಸ್, ಕರಿಯಪ್ಪಗೌಡ, ಸಿಆರ್ಪಿ ಧರ್ಮಪಾಲ್ ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ್ ಮೌರ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-36-196582244

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.