ಹಿರಿಯೂರು: ‘ಪದವಿ, ಪದವಿಪೂರ್ವ ಕಾಲೇಜುಗಳು ನಡೆಸುವ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಶಿಬಿರಗಳ ಪ್ರಯೋಜನವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು’ ಎಂದು ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಅಧೀಕ್ಷಕ ಡಾ.ಎಸ್.ಎಲ್. ಪಾಲಾಕ್ಷಪ್ಪ ಮನವಿ ಮಾಡಿದರು.

ಹಿರಿಯೂರಿನ ಹುಳಿಯಾರು ರಸ್ತೆಯಲ್ಲಿರುವ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಮೇಟಿಕುರ್ಕೆ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2025–26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ಶಿಬಿರದಲ್ಲಿ ಆರೋಗ್ಯ ತಪಾಸಣೆ, ಪರಿಸರ ಸ್ವಚ್ಛತೆ, ಮೂಢನಂಬಿಕೆಗಳ ವಿರುದ್ಧ ಜಾಗೃತಿ, ಶಿಕ್ಷಣದ ಮಹತ್ವ ಒಳಗೊಂಡಂತೆ ವಿವಿಧ ವಿಷಯಗಳ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಲಾಗುತ್ತದೆ. ಶಿಬಿರ ಮುಗಿಯುವವರೆಗೆ ಎಲ್ಲ ರೀತಿಯ ಸಹಕಾರ ಕೊಡಬೇಕು’ ಎಂದು ಕೋರಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಎಂ. ಶಿವಲಿಂಗಪ್ಪ, ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.ಆರ್. ಹನುಮಂತರಾಯ ಮಾತನಾಡಿದರು. ಶಿಬಿರಾಧಿಕಾರಿ ಎನ್.ಬಿ. ಗಟ್ಟಿ ಸ್ವಾಗತಿಸಿದರು. ಸ್ವಯಂ ಸೇವಕಿ ನೀತು ರಾಜು ನಾಯಕ್ ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-44-1206417046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.