ಹಿರಿಯೂರು: ‘ವಿದ್ಯಾರ್ಥಿ ಜೀವನದ ಅವಧಿಯನ್ನು ಮೆಟ್ಟಿಲು ಮಾಡಿಕೊಂಡು ಭವಿಷ್ಯದಲ್ಲಿ ಸಮಾಜಮುಖಿ ಬದುಕು ಕಟ್ಟಿಕೊಳ್ಳಬೇಕು’ ಎಂದು ನಗರಸಭೆ ಪೌರಾಯುಕ್ತ ಎ. ವಾಸೀಂ ಸಲಹೆ ನೀಡಿದರು.

ನಗರದ ಹುಳಿಯಾರು ರಸ್ತೆಯಲ್ಲಿರುವ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾರ್ಥಿಗಳು ರೀಲ್ಸ್ ಮತ್ತು ಮೊಬೈಲ್ ಘೀಳಿನಿಂದ ಹೊರಬರಬೇಕು. ಬದುಕಿಗೆ ಗುರಿಯನ್ನಿಟ್ಟುಕೊಂಡು ಅದನ್ನು ತಲುಪುವ ಬಗ್ಗೆ ಗಂಭೀರ ಪ್ರಯತ್ನ ಮಾಡಬೇಕು. ಬಡತನದ ಹಿನ್ನೆಲೆಯಿಂದ ಬಂದ ಅನೇಕ ವಿದ್ಯಾರ್ಥಿಗಳು ತಮ್ಮ ಪರಿಶ್ರಮದ ಮೂಲಕ ಉನ್ನತ ಹುದ್ದೆಗಳಿಗೆ ಹೋಗಿರುವುದನ್ನು ಸ್ಫೂರ್ತಿ ಯನ್ನಾಗಿ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ವಿದ್ಯಾರ್ಥಿಗಳು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣ ಪಡೆಯುವ ಸಮಯದಲ್ಲಿಯೇ ವೈಜ್ಞಾನಿಕ ಚಿಂತನೆಯನ್ನು ಅಳವಡಿಸಿಕೊಂಡಲ್ಲಿ ಭವಿಷ್ಯದ ಬದುಕು ಉತ್ತಮವಾಗಿರುತ್ತದೆ’ ಎಂದು ನಿವೃತ್ತ ಪ್ರಾಂಶುಪಾಲ ಎಂ.ಜಿ. ರಂಗಸ್ವಾಮಿ ಹೇಳಿದರು.

ಸಮಾರಂಭದ ಆರಂಭಕ್ಕೂ ಮೊದಲು ಈಚೆಗೆ ನಿಧನರಾದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರಿಗೆ ಗೌರವ ಸಮರ್ಪಿಸಿ, ಕಾಲೇಜಿನ ಅಭಿವೃದ್ಧಿಗೆ ಅವರು ನೀಡಿದ ಮಹತ್ವದ ಕೊಡುಗೆಗಳ ಬಗ್ಗೆ ಸ್ಮರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಡಿ.ಆರ್. ಹನುಮಂತರಾಯ, ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯ ಶಾಂತರಾಜಯ್ಯ, ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕ ಎಸ್. ಮಾರುತಿ ಮಾತನಾಡಿದರು.

ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಸಮಿತಿ ಸಂಚಾಲಕಿ ಪ್ರೊ. ಆರ್. ಪುಷ್ಪಲತಾ, ಯೂತ್ ರೆಡ್ ಕ್ರಾಸ್ ಘಟಕದ ಸಂಚಾಲಕ ಎಸ್.ಜಿ. ಧನಂಜಯ, ಎನ್. ಎಸ್. ಎಸ್. ಘಟಕದ ಸಂಚಾಲಕ ಎನ್.ಬಿ. ಗಟ್ಟಿ, ದೈಹಿಕ ಶಿಕ್ಷಣ ವಿಭಾಗದ ಸಂಚಾಲಕ ಅಣ್ಣಪ್ಪಸ್ವಾಮಿ, ರೇಂಜರ್ಸ್ ಘಟಕದ ಸಂಚಾಲಕ ಪ್ರೊ. ಡಿ. ಚೈತ್ರಾ, ರೋವರ್ಸ್ ಘಟಕದ ಸಂಚಾಲಕ ಪ್ರೊ.ರಾಹುಲ್ ಲಂಬಾಣಿ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಪ್ರೊ. ಎಲ್.ನಾಗರಾಜು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-44-1641139330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.