ಹೊಳಲ್ಕೆರೆ: ‘ರಕ್ತದಾನ ಮಾಡುವುದರಿಂದ ಮತ್ತೊಬ್ಬರ ಜೀವ ಉಳಿಸಿದ ತೃಪ್ತಿ ಸಿಗುತ್ತದೆ’ ಎಂದು ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಆಡಳಿತ ಮಂಡಳಿ ಸದಸ್ಯ ಎಂ.ಕೆ.ಅನಂತ ರೆಡ್ಡಿ ಹೇಳಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುಧವಾರ ಕಾಲೇಜು ಶಿಕ್ಷಣ ಇಲಾಖೆ ಹಾಗೂ ರೆಡ್ ಕ್ರಾಸ್ ಯುವ ಘಟಕದಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ರಕ್ತದಾನ ಮಾಡುವುದರಿಂದ ವ್ಯಕ್ತಿಯ ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಆಗುತ್ತದೆ ಎಂಬುದು ತಪ್ಪು ಕಲ್ಪನೆ. ರಕ್ತದಾನ ಮಾಡಿದ ನಂತರ ದೇಹದಲ್ಲಿ ಮತ್ತೆ ರಕ್ತ ಉತ್ಪತ್ತಿಯಾಗುತ್ತದೆ. ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು. ರೆಡ್ ಕ್ರಾಸ್ ಸಂಸ್ಥೆ ರಕ್ತದಾನ ಶಿಬಿರಗಳನ್ನು ಏರ್ಪಡಿಸುವ ಮೂಲಕ ಜನ ಜಾಗೃತಿ ಮೂಡಿಸುವ ಜೊತೆಗೆ ರೋಗಿಗಳಿಗೆ ನೆರವಾಗುತ್ತಿದೆ’ ಎಂದರು.

ರೆಡ್ ಕ್ರಾಸ್ ಘಟಕದ ಸಂಚಾಲಕ ಎಚ್.ಎಲ್.ಪ್ರವೀಣ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಪ್ರೊ.ಸಿ.ಕೆ.ಕೊಟ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಚಿತ್ರದುರ್ಗದ ಸರ್ಕಾರಿ ರಕ್ತನಿಧಿ ಕೇಂದ್ರದ ಡಾ.ಮೌನಿಕಾ ರಕ್ತದಾನದ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ರೆಡ್ ಕ್ರಾಸ್ ಸಂಸ್ಥೆಯ ಉಪಸಭಾಪತಿ ಸಿ.ಇ.ಅರುಣ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಎನ್.ಮಜರ್ ಉಲ್ಲಾ, ಸಭಾಪತಿ ಬಿ.ಜಿ.ಗಿರೀಶ್ ಕುಮಾರ್, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-44-1418155972

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.