ಹೊಳಲ್ಕೆರೆ: ‘ದೇಶದ ಪ್ರಗತಿ ಹಾಗೂ ಸಮಾಜದ ಸುಧಾರಣೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ’ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.

ಪಟ್ಟಣದ ಸಂವಿಧಾನ ಸೌಧದಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

‘ಶಿಕ್ಷಣದಿಂದ ಮಾತ್ರ ನಮ್ಮ ಸಮಾಜ, ಕುಟುಂಬದ ಪರಿವರ್ತನೆ ಸಾಧ್ಯ. ದಲಿತರು, ಹಿಂದುಳಿದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಆಸ್ತಿಯನ್ನಾಗಿ ಮಾಡಬೇಕು. ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಧ್ಯೇಯವಾಗಿತ್ತು’ ಎಂದರು.

‘ಸಂವಿಧಾನಶಿಲ್ಪಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು. ದೇಶದ ಉಪ ಪ್ರಧಾನಿಯಾಗಿದ್ದ ಬಾಬೂಜಿ ಅನೇಕ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದರು. ಇಂತಹ ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಕೊಳ್ಳಬೇಕು’ ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಿ.ಆರ್.ಪಾಂಡುರಂಗಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಉಪನ್ಯಾಸಕ ಚಂದ್ರಪ್ಪ ಹಾಗೂ ಚಿತ್ರದುರ್ಗದ ಸರ್ಕಾರಿ ಕಾಲೇಜಿನ ಉಪನ್ಯಾಸಕ ತಿಪ್ಪೇಸ್ವಾಮಿ ಉಪನ್ಯಾಸ ನೀಡಿದರು.

ತಹಶೀಲ್ದಾರ್ ವಿಜಯಕುಮಾರ್, ತಾ.ಪಂ. ಇಒ ಶಿವಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ಉಮೇಶ್, ಬಿಇಒ ಎಚ್.ಶ್ರೀನಿವಾಸ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಟಿ.ಹನುಮಂತಪ್ಪ, ಭೋವಿ ಸಮಾಜದ ಮುಖಂಡ ತಿಪ್ಪೇಸ್ವಾಮಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ತಿಪ್ಪೇಶಪ್ಪ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಶಿವಮೂರ್ತಿ, ರಾಜ್ಯ ಸಂಘಟನಾ ಸಂಚಾಲಕ ಕಸ್ತೂರಪ್ಪ, ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಡಿ.ಸಿ.ಮೋಹನ್, ಕಿರಣ್ಕುಮಾರ್, ನಾಗರಾಜ್, ಶಿವಕುಮಾರ್, ರಂಗಣ್ಣ, ಶ್ರೀನಿವಾಸ್, ರುದ್ರೇಶ್, ಸೂರೇಗೌಡ, ಪುಟ್ಟಣ್ಣ, ಕುಮಾರಣ್ಣ, ನವೀನ್, ಮಂಜಣ್ಣ, ಪ್ರಸನ್ನ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-44-1344112705

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.