ಹೊಳಲ್ಕೆರೆ: ‘ಉದ್ಯೋಗದ ದೃಷ್ಟಿಕೋನ ಹೊಂದಿರುವ ಶಿಕ್ಷಣ ನಮಗೆ ಬೇಡ’ ಎಂದು ಕವಿ ಚಂದ್ರಶೇಖರ ತಾಳ್ಯ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ 2025–26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್, ರೋವರ್ಸ್ ಮತ್ತು ಯುವ ರೆಡ್ಕ್ರಾಸ್ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಇಂದಿನ ಶಿಕ್ಷಣ ವ್ಯವಸ್ಥೆ ವ್ಯಾಪಾರೀಕರಣಗೊಂಡಿದ್ದು, ಉದ್ಯೋಗವನ್ನೇ ಗುರಿಯಾಗಿಸಿಕೊಂಡು ಶಿಕ್ಷಣ ನೀಡಲಾಗುತ್ತಿದೆ. ಈಗಿನ ಶಿಕ್ಷಣದಲ್ಲಿ ಮೌಲ್ಯಗಳಿಗೆ ಬೆಲೆ ಇಲ್ಲ. ಇದು ಸಮಾಜದ ನೈತಿಕ ತಳಹದಿಯನ್ನೇ ಬುಡಮೇಲು ಮಾಡುತ್ತಿದೆ. ಹೊಸ ಶಿಕ್ಷಣ ವ್ಯವಸ್ಥೆ ಕೇವಲ ಗುಮಾಸ್ತರನ್ನು ಸೃಷ್ಟಿಸುತ್ತಿದೆ. ಆದರೆ, ನೈಜ ಶಿಕ್ಷಣವು ಅರಿವಿನ ಪ್ರಕ್ರಿಯೆಯಾಗಬೇಕು. ನೈತಿಕ ಬದುಕನ್ನು ಕಟ್ಟಿಕೊಡುವ ಶಿಕ್ಷಣವು ಇಂದಿನ ಅಗತ್ಯವಾಗಿದೆ’ ಎಂದರು.

ಎಲ್ಲಾ ಉಪನ್ಯಾಸಕರು ಬಿಳಿ ಪಂಚೆ, ಬಿಳಿ ಅಂಗಿ, ಟವಲ್ ಧರಿಸಿ ಆಕರ್ಷಿಸಿದರು. ಸಹ್ಯಾದ್ರಿ ಕಲಾ ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಚಂದ್ರಪ್ಪ ಉಪನ್ಯಾಸ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಮುರುಗೇಶ್, ಡಿ.ಸಿ. ಮೋಹನ್, ಬಸವರಾಜ ಯಾದವ್, ಪ್ರಾಂಶುಪಾಲ ಪ್ರೊ. ಕೊಟ್ರಪ್ಪ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವಮೂರ್ತಿ ನಾಯ್ಕ, ಐಕ್ಯೂಎಸಿ ಸಂಚಾಲಕ ಸುರೇಶ್, ಎಚ್.ಎಲ್. ಪ್ರವೀಣ್ ಕುಮಾರ್, ಎಂ.ಒ. ರಾಜಶೇಖರ್, ಪೂರ್ಣಿಮಾ, ಟಿ. ಮಂಜುನಾಥ, ಎಲ್ಲಾ ಘಟಕಗಳ ಸಂಚಾಲಕರು, ಬೋಧಕ, ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-44-2004266790

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.