ಹೊಳಲ್ಕೆರೆ: ಎಸ್ಎಸ್ಎಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ 120 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್. ಶಿವಮೂರ್ತಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಲು ಶ್ರಮಿಸಿದ ಶಾಲಾ–ಕಾಲೇಜುಗಳ ಕನ್ನಡ ಭಾಷಾ ಶಿಕ್ಷಕರನ್ನು ಹಾಗೂ ಸಂಸ್ಥೆಯ ಮುಖ್ಯ ಶಿಕ್ಷಕರು, ಪ್ರಾಂಶುಪಾಲರನ್ನೂ ಸನ್ಮಾನಿಸಲಾಗುವುದು.

ತಾಲ್ಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಹೆಚ್ಚು ಅಂಕ ಗಳಿಸಿದವರು ಸೂಕ್ತ ದಾಖಲೆಗಳೊಂದಿಗೆ ಜೂನ್ 10ರ ಒಳಗೆ ಎಲ್.ಐ.ಸಿ. ಕಚೇರಿ ಮುಂಭಾಗದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ಕಸಾಪ ಅಧ್ಯಕ್ಷ ಎನ್. ಶಿವಮೂರ್ತಿ ಅವರ ಮೊ.ಸಂ; 9980383294 ಹಾಗೂ ಗೌರವ ಕಾರ್ಯದರ್ಶಿ ಬಿ.ಜಿ.ಹಳ್ಳಿ ವೆಂಕಟೇಶ್ ಅವರ ಮೊ.ಸಂ; 7676534307ಕ್ಕೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-44-898867108

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.