ಹೊಳೆನರಸೀಪುರ: ‘ರಕ್ತಕ್ಕೆ ಪರ್ಯಾಯ ಇಲ್ಲ. ಅಗತ್ಯ ಸಂದರ್ಭದಲ್ಲಿ ರಕ್ತಬೇಕಾದರೆ ಮತ್ತೊಬ್ಬ ವ್ಯಕ್ತಿಯ ರಕ್ತವೇ ನೀಡಬೇಕು. ಆದ್ದರಿಂದ ಯುವಕರು ರಕ್ತದಾನ ಮಾಡಿ ಜೀವಗಳನ್ನು ಉಳಿಸಿ’ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಘಟಕದ ಕಾರ್ಯದರ್ಶಿ ಶಬ್ಬೀರ್ ಅಹಮದ್ ಹೇಳಿದರು.

ಶುಕ್ರವಾರ ತಾಲ್ಲೂಕಿನ ಪಡವಲಹಿಪ್ಪೆ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವವರು ಅಗತ್ಯ ಸಂದರ್ಭದಲ್ಲಿ ರಕ್ತ ಪಡೆದುಕೊಳ್ಳಲು ಸಾಧ್ಯವಾಗದೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಆದ್ದರಿಂದ ನೀವು ದಾನ ಮಾಡುವ ರಕ್ತದಿಂದ ಅನೇಕ ಜೀವಗಳನ್ನು ಉಳಿಸಬಹುದು ಎಂದರು.

ಚನ್ನರಾಯಪಟ್ಟಣದ ಎಚ್.ಜಿ.ಭರತ್ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಿ. ಅನೇಕರಿಗೆ ಸಹಾಯ ಮಾಡಬಹುದು. ಇತ್ತೀಚಿನ ದಿನದಲ್ಲಿ ರಕ್ತದೊತ್ತಡ, ಮಧುಮೇಹ ಕ್ಯಾನ್ಸರ್ನಂತಹ ಕಾಯಿಲೆಗಳು ಸಾಮಾನ್ಯ ಎನ್ನುವಂತಾಗಿದೆ. ಆದ್ದರಿಂದ ಆರೋಗ್ಯ ಕಾಪಾಡಿಕೊಳ್ಳಲು ಅಗತ್ಯವಾದ ಆಹಾರ ಪದ್ಧತಿ, ನಿಯಮಿತ ವ್ಯಾಯಾಮ ರೂಡಿಸಿಕೊಳ್ಳಿ ಎಂದರು.

ಹಾಸನ ಅಗರ್ವಾಲ್ ಕಣ್ಣಿನ ಆಸ್ಪತ್ರೆಯಿಂದ ಕಣ್ಣಿನ ರೋಗಗಳ ತಪಾಸಣೆ ನಡೆಸಿದರು. ಶಿಬಿರದಲ್ಲಿ ವಿದ್ಯಾರ್ಥಿಗಳು ಆಧ್ಯಾಪಕರು 69 ಯೂನಿಟ್ ರಕ್ತ ದಾನ ಮಾಡಿದರು.

ರೆಡ್ ಕ್ರಾಸ್ ನಿರ್ದೇಶಕ ಉದಯ್ಕುಮಾರ್ ಮಾತನಾಡಿದರು.ಪ್ರಾಂಶುಪಾಲರಾದ ಕೆ.ಸಿ.ವಿಶ್ವನಾಥ್, ಭುವನೇಂದ್ರ, ಸಂಚಾಲಕರಾದ ಸಂಜೀವ್ ಕುಮಾರ್, ಭೀಮರಾಜ್, ಅವಿನಾಶ್, ಲಕ್ಷ್ಮೀಶ್, ದೀಪು, ಸಿ.ಎಂ.ವೆಂಕಟೇಶ್, ದಿವಾಕರ್, ಉಮೇಶ್, ಚಂದ್ರಶೇಖರ್, ವೇಣುಪ್ರಸಾದ್, ಶಿವಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-36-1299190693

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.