ಹೊಳೆನರಸೀಪುರ: ‘ಶಾಲಾ ರಜಾದಿನಗಳಲ್ಲಿ ನಡೆಸುವ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಪಠ್ಯ ಬೋಧನೆ ಮಾಡದೆ ಪಠ್ಯೇತರ ಚಟುವಟಿಕೆಗಳನ್ನು ನಡೆಸಬೇಕು. ಗ್ರಾಮೀಣ ಕ್ರೀಡೆಗಳ ಪರಿಚಯಿಸಬೇಕು’ ಎಂದು ವಕೀಲ ಆರ್.ಡಿ.ರವೀಶ್ ಸಲಹೆ ನೀಡಿದರು.

ಹೊಳೆನರಸೀಪುರ ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯವರು ಸೋಶಿಯಲ್ ಕ್ಲಬ್ ಸಭಾಂಗಣದಲ್ಲಿ ಭಾನುವಾರದಿಂದ ಪ್ರಾರಂಭಿಸಿದ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ಶಿಬಿರದಲ್ಲಿ ಮಕ್ಕಳ ಆಸಕ್ತಿಯನ್ನು ಗಮನಿಸಿ ಅದಕ್ಕೆ ಪೂರಕವಾದ ಮಾರ್ಗದರ್ಶನ ನೀಡಿದರೆ ಬೇಸಿಗೆ ಶಿಬಿರಗಳು ಯಶಸ್ವಿಯಾಗುತ್ತದೆ’ ಎಂದರು.

‘ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಬಳಕೆಯಲ್ಲಿ ಅತಿಯಾಗಿ ತೊಡಗಿದ್ದು ಅದರಿಂದ ಆಗುವ ಕೆಟ್ಟ ಪರಿಣಾಮಗಳ ಬಗ್ಗೆ ತಿಳಿಸಿಕೊಟ್ಟು ಮೊಬೈಲ್ ಬಳಕೆಯನ್ನು ಕಡಿಮೆ ಮಾಡುವಂತೆ ತಿಳುವಳಿಕೆ ನೀಡಬೇಕು. ಬಹುತೇಕ ಮರೆತೇ ಹೋಗಿರುವ ಲಗೋರಿ, ಚಿನ್ನಿ ದಾಂಡು, ಕುಂಟೆ ಬಿಲ್ಲೆ, ಕೊಕ್ಕೋ ಆಟಗಳನ್ನು ಆಡಿಸಬೇಕು’ ಎಂದರು.

ಸ್ಕೌಟ್ಸ್ ಅಂಡ್ ಗೈಡ್ಸ್ ಕಾರ್ಯದರ್ಶಿ ಆರ್.ಕುಮುದಾ, ‘ಕಳೆದ ಹತ್ತು ವರ್ಷಗಳಿಂದ ಉಚಿತವಾಗಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ನಡೆಸುತ್ತಿದ್ದೇವೆ. ಏಪ್ರಿಲ್ 10ರವರೆಗೆ ಪ್ರತಿದಿನ ಬೆಳಿಗ್ಗೆ 9ರಿಂದ ಮಧ್ಯಾಹ್ನ 1.30ರವರೆಗೆ ನಡೆಸಲಾಗುತ್ತದೆ’ ಎಂದರು. ಶಿಬಿರ ನಡೆಸಲು ಸ್ಥಳಾವಕಾಶ ನೀಡಿದ ಸೋಶಿಯಲ್ ಕ್ಲಬ್ ಅಧ್ಯಕ್ಷ ಕೆ.ಎಂ.ಹೊನ್ನಪ್ಪ ಹಾಗೂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ಸ್ಟೂಡಿಯೊ ಅಶೋಕ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲ್ಲೂಕು ಘಟಕದ ಅಧ್ಯಕ್ಷ ಮುರಳೀಧರ ಗುಪ್ತ ಅವರನ್ನು ಸನ್ಮಾನಿಸಲಾಯಿತು.

ಶಿಬಿರದಲ್ಲಿ 110ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಕಬ್ ಮಾಸ್ಟರ್ ವಿಜಯಕುಮಾರಿ, ಗೈಡ್ ಕ್ಯಾಪ್ಟನ್ ರಂಗಮ್ಮ, ನಾಗಾರ್ಜುನ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-36-1604567834

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.