ಹೊಳೆನರಸೀಪುರ: ‘ವಿದ್ಯಾರ್ಥಿಗಳು ಓದುವ ಜೊತೆಗೆ ಕೇಳುವ ಕಲೆಯನ್ನು ಬೆಳೆಸಿಕೊಳ್ಳಿ’ ಎಂದು ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಸಲಹೆ ನೀಡಿದರು.

ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಸೋಶಿಯಲ್ ಕ್ಲಬ್ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪಟ್ಟಣದ ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಮಾತನಾಡಿ, ‘ಕ್ಲಬ್ ಪ್ರತಿ ವರ್ಷ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರ ಮಾಡುತ್ತಾ ಬಂದಿದೆ. ಕ್ಲಬ್ ಸ್ಥಳದಲ್ಲಿ ನಿರಂತರ ಶಿಕ್ಷಣ ಚಟುವಟಿಕೆಗಳಿಗೆ ಅವಕಾಶ ನೀಡಿ ಸಹಾಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ’ ಎಂದರು.

‘ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ವಿದ್ಯಾಭ್ಯಾಸಕ್ಕೆ ಪೂರಕವಾದದನ್ನು ಮಾತ್ರ ನೋಡಿ ಚೆನ್ನಾಗಿ ವ್ಯಾಸಂಗ ಮಾಡಿ ಉತ್ತಮ ಬದುಕು ರೂಪಿಸಿಕೊಳ್ಳಿ’ ಎಂದು ಹೇಳಿದರು.

ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಮನಶಾಸ್ತ್ರ ವಿಭಾಗದ ಮುಖ್ಯಸ್ಥ ಕೃಷ್ಣಮೂರ್ತಿ ಮಾತನಾಡಿ, ‘ಇಂದಿನ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ನಂತರ ಅವರ ಆಸಕ್ತಿ ಏನು ಎಂಬುದನ್ನು ವೈಜ್ಞಾನಿಕವಾಗಿ ತಿಳಿದುಕೊಳ್ಳಲು ನಮ್ಮ ಕಾಲೇಜಿನಲ್ಲಿ ಹಲವು ಆಯಾಮಗಳ ಪ್ರಶ್ನೆ ಪತ್ರಿಕೆಯನ್ನು ಹೊರತಂದಿದ್ದೇವೆ. ಈ ಪ್ರಶ್ನೆ ಪತ್ರಿಕೆಯಲ್ಲಿ ವಿದ್ಯಾರ್ಥಿಗಳು ಬರೆದಿರುವ ಉತ್ತರಗಳನ್ನು ನೀಡಿ ಯಾವುದರಲ್ಲಿ ಆಸಕ್ತಿ ಇದೆ, ಯಾವ ವಿಷಯದಲ್ಲಿ ವ್ಯಾಸಂಗ ಮಾಡಿದರೆ ಒಳೆಯದು ಎನ್ನುವ ಸಂಪೂರ್ಣ ಮಾಹಿತಿ ನೀಡುತ್ತೇವೆ. ಈ ಬಗ್ಗೆ ತಿಳಿದುಕೊಳ್ಳಲು ಸರ್ಕಾರಿ ಗೃಹ ವಿಜ್ಞಾನ ಕಾಲೇಜಿಗೆ ಭೇಟಿ ನೀಡಿ’ ಎಂದರು.

ಸರ್ಕಾರಿ ಶಾಲೆಗಳಲ್ಲಿ ಓದಿ, ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತೀ ವಿದ್ಯಾರ್ಥಿಗಳಿಗೆ ₹2 ಸಾವಿರ ನಗದು ಬಹುಮಾನ, ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಕ್ಲಬ್ ಅಧ್ಯಕ್ಷ ಕೆ.ಎಂ. ಹೊನ್ನಪ್ಪ, ಕಾರ್ಯದರ್ಶಿ ಕೆ.ಆರ್. ಸುದರ್ಶನ್ ಬಾಬು ಮಾತನಾಡಿದರು. ಸುರೇಶ್ ಕುಮಾರ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಫಕೀರಮ್ಮ ಮುರಗೋಡು ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-36-1424145967

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.