ಹೊಳಲ್ಕೆರೆ: ವಿದ್ಯಾರ್ಥಿಗಳಿಗೆ ಉತ್ತಮ ಜೀವನ ರೂಪಿಸಿಕೊಳ್ಳಲು ಸರಿ ದಾರಿಯನ್ನು ತೋರಿಸುವುದು ಶಿಕ್ಷಕರ ಕರ್ತವ್ಯ ಎಂದು ನಿವೃತ್ತ ಪ್ರಾಚಾರ್ಯ ಮುರುಗೇಂದ್ರಪ್ಪ ತಿಳಿಸಿದರು.

1997 ರಿಂದ 2004ರ ಅವಧಿಯಲ್ಲಿ ಪದವಿ ಶಿಕ್ಷಣ ಪಡೆದ ಹಿರಿಯ ವಿದ್ಯಾರ್ಥಿಗಳು ಪಟ್ಟಣದ ಒಂಟಿಕಲ್ಲು ಕಂಬದ ಮಠದಲ್ಲಿ ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹ–ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದೆ ಪಿಯುಸಿ ಮುಗಿಸಿದ ಬಹುತೇಕ ವಿದ್ಯಾರ್ಥಿಗಳು ಚಿತ್ರದುರ್ಗ ಅಥವಾ ದಾವಣಗೆರೆ ನಗರಗಳಿಗೆ ಹೋಗಿ ಪದವಿ ಶಿಕ್ಷಣ ಪಡೆಯುವ ಸ್ಥಿತಿ ಇತ್ತು. ಆಗ ಚಿತ್ರದುರ್ಗದ ಎಸ್ಜೆಎಂ ವಿದ್ಯಾಪೀಠ ಚಿಕ್ಕಜಾಜೂರಿನಲ್ಲಿ 1997 ರಲ್ಲಿ ಪದವಿ ಕಾಲೇಜನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ನೆರವಾಯಿತು. ಬಿ.ದುರ್ಗ ಹೋಬಳಿ ಹಾಗೂ ಚಿಕ್ಕಜಾಜೂರು ವ್ಯಾಪ್ತಿಯ ನೂರಾರು ವಿದ್ಯಾರ್ಥಿಗಳು ಇಲ್ಲೇ ಪದವಿ ಪಡೆಯಲು ಅನುಕೂಲವಾಯಿತು. ಕಾಲೇಜಿನಲ್ಲಿ ಉತ್ತಮ ನುರಿತ ಅಧ್ಯಾಪಕರು ಹಾಗೂ ಗ್ರಂಥಾಲಯ ಇರುವುದರಿಂದ ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಲು ಸಹಕಾರಿಯಾಯಿತು ಎಂದು ಸ್ಮರಿಸಿದರು.

ನಿವೃತ್ತ ಪ್ರಾಚಾರ್ಯ ಜೆ.ತಿಮ್ಮಪ್ಪ, ಅಧ್ಯಾಪಕರಾದ ಜಿ.ಕೆ. ಶಿವಕುಮಾರ್, ವೆಂಕಟೇಶ್, ಶಿವಲಿಂಗಪ್ಪ, ಎ.ಎಸ್. ಮಂಜಪ್ಪ, ಈಶ್ವರಪ್ಪ, ಯೋಗೀಶ್, ಹಿರಿಯ ವಿದ್ಯಾರ್ಥಿಗಳಾದ ಜೆ. ಮಂಜುನಾಥ, ಎಚ್. ದೇವರಾಜ್, ಜಯಶೀಲಾ, ಪೂರ್ಣಿಮಾ, ಮಂಜುನಾಥಯ್ಯ, ಎಸ್. ಪ್ರಭಾಕರ, ನರಸಿಂಹ ಮೂರ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-44-1369385243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.