ಹೊನ್ನಾವರ: ‘ಪ್ರತಿಭಾನ್ವಿತರು ಹಾಗೂ ಸಾಧಕರನ್ನು ಪ್ರೋತ್ಸಾಹಿಸುವ ಜೊತೆಗೆ ಶಿಕ್ಷಣಕ್ಕೆ ಉತ್ತೇಜನ ನೀಡಿದರೆ ಇಡೀ ಸಮಾಜ ಅಭಿವೃದ್ಧಿ ಹೊಂದುತ್ತದೆ’ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು.

ಶ್ರೀನಿಧಿ ಸೇವಾ ವಾಹಿನಿ ವತಿಯಿಂದ ಬಾಳೆಗದ್ದೆಯ ವೆಂಕಟರಮಣ ಸಭಾಭವನದಲ್ಲಿ ಭಾನುವಾರ ನಡೆದ ಶ್ರೀನಿಧಿ ಸಂಘದ ಬೆಳ್ಳಿ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಧುವಿರ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ನಾಯ್ಕ ಮಾತನಾಡಿ, ‘ವಿದ್ಯಾರ್ಥಿಗಳು ವೃತ್ತಿ ಕೌಶಲ ಹೊಂದಿ ಸಿಗುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಭಟ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ನಾಗೇಶ ಶೆಟ್ಟಿ ಮಾತನಾಡಿ, ‘ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ನೋಂದಣಾಧಿಕಾರಿ ನಾಗಭೂಷಣ ಮಾತನಾಡಿದರು. ಹೊಸಾಕುಳಿ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಸುರೇಶ ಶೆಟ್ಟಿ, ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷ ಗಜಾನನ ಶೆಟ್ಟಿ, ವೆಂಕಟ್ರಮಣ ದೇವಸ್ಥಾನದ ಅಧ್ಯಕ್ಷ ಎಸ್.ಕೆ.ಶೆಟ್ಟಿ, ಪ್ರದೀಪ ಶೆಟ್ಟಿ, ಸುನಂದಾ ಶೆಟ್ಟಿ, ಉದ್ಯಮಿ ನರಸಿಂಹ ಶೆಟ್ಟಿ, ಎಂಜಿನಿಯರ್ ಸದಾನಂದ ಶೆಟ್ಟಿ, ಸಂದೇಶ ಶೆಟ್ಟಿ ಭಾಗವಹಿಸಿದ್ದರು.

ಶ್ರೀನಿಧಿ ಸೇವಾ ವಾಹಿನಿ ಅಧ್ಯಕ್ಷ ಕೇಶವ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಜುನಾಥ ಶೆಟ್ಟಿ ಸ್ವಾಗತಿಸಿದರು. ಆರ್.ಬಿ.ಶೆಟ್ಟಿ, ಜಿ.ಆರ್. ಶೆಟ್ಟಿ ನಿರೂಪಿಸಿದರು. ಮಹೇಶ ಶೆಟ್ಟಿ ವಂದಿಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-20-1622025319

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.