ಹೊನ್ನಾವರ: ‘ಎಂ.ಪಿ.ಇ. ಸೊಸೈಟಿ ಹಾಗೂ ಎಸ್.ಡಿ.ಎಂ. ಕಾಲೇಜು ಪೂರ್ವ ವಿದ್ಯಾರ್ಥಿಗಳ ಸಂಘಗಳ ಸಹಯೋಗದಲ್ಲಿ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ‘ಎಸ್.ಡಿ.ಎಂ. ಸಂಭ್ರಮ’ವನ್ನು ಕಾಲೇಜಿನ ಡಾ.ಎನ್.ಆರ್.ನಾಯಕ ಬಯಲು ರಂಗಮಂದಿರದಲ್ಲಿ ಏಪ್ರಿಲ್ 4ಹಾಗೂ 5ರಂದು ಹಮ್ಮಿಕೊಳ್ಳಲಾಗಿದೆ’ ಎಂದು ಸೊಸೈಟಿ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದ ಅವರು, ‘ಕಾಲೇಜು 60 ವರ್ಷ ಪೂರೈಸಿದ ಸಂದರ್ಭದಲ್ಲಿ ಎಸ್.ಡಿ.ಎಂ. ಸಂಭ್ರಮ ಆಯೋಜಿಸಲಾಗಿದೆ. ಭಾವ ಸಂಗಮ, ವಿಚಾರ ವಿನಿಮಯ, ಭವಿಷ್ಯದಲ್ಲಿ ಕಾಲೇಜಿನ ಅಭಿವೃದ್ಧಿಯ ಕುರಿತ ಚರ್ಚೆ, ಆರ್ಥಿಕ ಸಹಾಯ ಮೊದಲಾದವುಗಳಿಗೆ ಸಂಭ್ರಮ ವೇದಿಕೆ ಕಲ್ಪಿಸಿದೆ’ ಎಂದು ತಿಳಿಸಿದರು.

ಬಿ.ಎನ್.ಬಿ. ಸೆಕ್ಯುರಿಟಿ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಆನಂದ ಭಟ್ಟ 4ರಂದು ಬೆಳಿಗ್ಗೆ 10ಕ್ಕೆ ಉದ್ಘಾಟನೆ ನೆರವೇರಿಸಲಿದ್ದು, ಕಲ್ಮಾಡಿ ಅಸೆಮ್ಸ್ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಪವನ್ ಕಿರಣಕೆರೆ, ವಿಜಯ ಕಾಮತ ಭಾಗವಹಿಸುವರು. ನಿವೃತ್ತ ಪ್ರಾಚಾರ್ಯರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ಕಾಲೇಜಿನ ಆರಂಭಿಕ ಐದು ವರ್ಷಗಳ ವಿದ್ಯಾರ್ಥಿಗಳಿಗೆ ಸನ್ಮಾನ, ಸಂವಾದ, ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ’ ಎಂದರು.

‘5ರಂದು ಬೆಳಿಗ್ಗೆ 10ಕ್ಕೆ ರ್ಯಾಂಕ್ ವಿಜೇತರು, ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದವರಿಗೆ ಸನ್ಮಾನ ನಡೆಯುವುದು. ಸಂಜೆ 4.30ಕ್ಕೆ ಸಮಾರೋಪ ನಡೆಯಲಿದೆ. ನಿವೃತ್ತ ಶಿಕ್ಷಕ ಎಚ್.ಎನ್. ಪೈ ಭಾಗವಹಿಸುವರು. ನಂತರ ಯಕ್ಷಗಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಅವರು ತಿಳಿಸಿದರು.

ಎಂಪಿಇ ಸೊಸೈಟಿ ಉಪಾಧ್ಯಕ್ಷ ನಾಗರಾಜ ಕಾಮತ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ ಕಾಮತ, ಕಾರ್ಯದರ್ಶಿ ಡಿ.ಎಲ್. ಹೆಬ್ಬಾರ, ಪ್ರಾಚಾರ್ಯ ಜಿ.ಎನ್. ಭಟ್ಟ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-20-419707940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.