ಹೊಸದುರ್ಗ: ತಾಲ್ಲೂಕಿನ ಅತ್ತಿಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಆರಂಭವಾಗಿರುವುದರಿಂದ ಈ ಬಾರಿ ದಾಖಲಾತಿ ಹೆಚ್ಚಿದೆ. ಕಳೆದ ಬಾರಿ 39 ವಿದ್ಯಾರ್ಥಿಗಳಿದ್ದರು. ಈ ಬಾರಿ 48 ಜನ ಶಾಲೆಗೆ ಸೇರ್ಪಡೆ ಆಗಿದ್ದಾರೆ.

ಸೋಮವಾರ ವಿದ್ಯಾರ್ಥಿಗಳನ್ನು ಎತ್ತಿನ ಗಾಡಿಯಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಶಾಲೆಗೆ ಕರೆ ತರಲಾಯಿತು. ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು ಹೂವು ನೀಡಿ ಸ್ವಾಗತಿಸಿದರು.

‘ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಆರಂಭವಾಗಿರುವುದರಿಂದ ಈ ಬಾರಿ ದಾಖಲಾತಿ ಹೆಚ್ಚಿದೆ. ಪೋಷಕರು ಮಕ್ಕಳನ್ನು ಖಾಸಗಿ ಶಾಲೆಯಿಂದ ಕರೆತಂದು ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದಾಖಲಾತಿ ಇನ್ನೂ ಹೆಚ್ಚಾಗಲಿದೆ’ ಎಂದು ಮುಖ್ಯ ಶಿಕ್ಷಕ ಆರ್.ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಕರಿತಿಮ್ಮಪ್ಪ, ಸಿ.ಆರ್.ಪಿ. ರೂಪಾ, ಸಹ ಶಿಕ್ಷಕರಾದ ಶಬನಾಬಾನು, ಸವಿತಾ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಪೋಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-44-677373540

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.