ಹೊಸದುರ್ಗ: ‘ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಇಂದು ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿದೆ‘ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಆರ್. ಶಾಂತಪ್ಪ ಸ್ಮರಿಸಿದರು.

ಕಸಾಪ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದ ಕನ್ನಡ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕನ್ನಡ ಸಾಹಿತ್ಯ ಪರಿಷತ್ತಿಗೆ ಭವ್ಯವಾದ ಇತಿಹಾಸವಿದ್ದು, ನಿರಂತರವಾಗಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ ಮತ್ತು ಕಲೆಯನ್ನು ಪ್ರೋತ್ಸಾಹಿಸುತ್ತಿದೆ. ಕನ್ನಡಕ್ಕೆ ಧಕ್ಕೆ ಬಂದಾಗ ಎಲ್ಲರೂ ಧ್ವನಿ ಎತ್ತಬೇಕು ಎಂದರು.

‘ಕನ್ನಡ ಸಾಹಿತ್ಯ ಪರಿಷತ್ ಪುಸ್ತಕ ಪ್ರಕಟಣೆ, ಸಾಹಿತ್ಯ ಸಮ್ಮೇಳನಗಳ ಆಯೋಜನೆ, ಬರಹಗಾರರು, ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಮೂಲಕ ಕರ್ನಾಟಕ ಏಕೀಕರಣದ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದೆ’ ಎಂದು ಕಸಾಪ ತಾಲ್ಲೂಕು ಘಟಕದ ಉಪಾಧ್ಯಕ್ಷ ನಾಗತಿಹಳ್ಳಿ ಮಂಜುನಾಥ್ ಹೇಳಿದರು. ಕಸಾಪ ತಾಲ್ಲೂಕು ಘಟಕದ ಕಾರ್ಯದರ್ಶಿ ಎಂ.ಎಸ್. ರಮೇಶ್, ಸಹ ಕಾರ್ಯದರ್ಶಿ ಅಂಬರೀಷ್, ಮುಖಂಡರಾದ ಬಿ.ಪಿ. ಓಂಕಾರಪ್ಪ, ಬ.ಮೈಲಾರಪ್ಪ, ಕೆ.ಬಿ. ಚಂದ್ರಯ್ಯ, ಕವಯತ್ರಿ ನಳಿನಾ ಸೇರಿ ಪದಾಧಿಕಾರಿಗಳು ಹಾಗೂ ಸಾಹಿತಿಗಳಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-44-1368724433

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.