ಹೊಸದುರ್ಗ: ತಾಲ್ಲೂಕು ವ್ಯಾಪ್ತಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಜನಾಂಗದ ಅರ್ಹ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://www.sw.kar.nic.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪರಿಶಿಷ್ಟ ಜಾತಿಯ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನಕ್ಕೂ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹೊಸದುರ್ಗದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ (ಗ್ರೇಡ್-2) ಕಚೇರಿ, ದೂರವಾಣಿ ಸಂಖ್ಯೆ 08199–230050ಗೆ ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-44-1908246332

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.