ಹೊಸದುರ್ಗ: ‘ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ ಮತ್ತು ಸ್ವಾವಲಂಬನೆಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಾರ್ಥಕ ಬದುಕು ಸಾಗಿಸಲು ಸಾಧ್ಯ’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಸಾಣೇಹಳ್ಳಿಯ ಶ್ರೀಮಠದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ‘ಮಕ್ಕಳ ಹಬ್ಬ’ ಬೇಸಿಗೆ ಶಿಬಿರದ ಚಿಂತನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ಬಸವಾದಿ ಶರಣರು ನೀಡಿದ ಕಾಯಕ, ದಾಸೋಹ ಮತ್ತು ಇಷ್ಟಲಿಂಗ ತತ್ವಗಳು ಕೇವಲ ಧಾರ್ಮಿಕ ಆಚರಣೆಗಳಲ್ಲ. ಅವು ನೆಮ್ಮದಿಯ ಬದುಕಿನ ಸೂತ್ರಗಳು. ಮಾಡುವ ಕೆಲಸದಲ್ಲಿ ಶ್ರದ್ಧೆ ಇರುವುದೇ ಕಾಯಕ. ಗಳಿಸಿದ ಸಂಪತ್ತನ್ನು ಸಮಾಜಕ್ಕೆ ಅರ್ಪಿಸುವುದೇ ದಾಸೋಹ. ಇಷ್ಟಲಿಂಗವು ಸ್ವಯಂ ಶಿಸ್ತು ಮತ್ತು ಆತ್ಮಾವಲೋಕನದ ದಾರಿಯಾಗಿದೆ. ಮಕ್ಕಳನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಉದ್ದೇಶದೊಂದಿಗೆ ಈ ಬೇಸಿಗೆ ಶಿಬಿರವು ಅರ್ಥಪೂರ್ಣವಾಗಿ ಸಾಗುತ್ತಿದೆ’ ಎಂದು ಸ್ವಾಮೀಜಿ ಹೇಳಿದರು.

ಸಂಗೀತ ಶಿಕ್ಷಕ ಎಚ್.ಎಸ್. ನಾಗರಾಜ್, ಯೋಗ ಶಿಕ್ಷಕ ದೇವೇಂದ್ರಪ್ಪ ಸೇರಿ ಶಿಬಿರಾರ್ಥಿಗಳು ಹಾಗೂ ಶ್ರೀಮಠದ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-44-2088225292

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.