ಹೊಸನಗರ: ‘ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಬಂಗಾರದಂತಹ ಬದುಕು ಹಾಳು ಮಾಡಿಕೊಳ್ಳುತ್ತಿರುವುದು ಅತ್ಯಂತ ದುಃಖದ ಸಂಗತಿ’ ಎಂದು ಉಪನ್ಯಾಸಕ ನಾಗೇಶ್ ಬಿದರಗೋಡು ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಪದವಿ ಕಾಲೇಜಿನ ಸಾಂಸ್ಕೃತಿಕ ಹಾಗೂ ವಿವಿಧ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.

‘ವಿದ್ಯಾರ್ಥಿಗಳು ಎಂದಿಗೂ ದುಶ್ಚಟಗಳಿಗೆ ದಾಸರಾಗಬಾರದು. ಕೆಟ್ಟ ಚಟಗಳಿಗೆ ಒಮ್ಮೆ ಅಂಟಿಕೊಂಡರೆ ಬದುಕು ಕತ್ತಲೆಯ ಕೂಪವಾಗುತ್ತದೆ. ಬದುಕಿನ ನಿಜವಾದ ಸ್ವಾರಸ್ಯವಿರುವುದು ಅಭಿರುಚಿ ಹಾಗೂ ಹವ್ಯಾಸಗಳಲ್ಲಿ. ವಿದ್ಯಾರ್ಥಿಗಳು ಇದನ್ನು ಅರಿತು ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು.

‘ಅತಿವೇಗದ ಬದುಕಿಗೆ ಕಡಿವಾಣ ಬೇಕು. ನೆಮ್ಮದಿಯುತ ಬದುಕು ನಮ್ಮದಾಗಬೇಕೇ ಹೊರತು ಹಣದ ಹಿಂದೆ ಓಡುವ ಬದುಕು ನಮ್ಮದಾಗರಬಾರದು’ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಕಿವಿಮಾತು ಹೇಳಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಅಶ್ವಿನಿಕುಮಾರ್ ಮಾತನಾಡಿದರು.

ಇಡೀ ವರ್ಷದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಹಾಗೂ ಕಳೆದ ಸಾಲಿನಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪ್ರಾಂಶುಪಾಲ ಕೆ.ಉಮೇಶ್ ಅಧ್ಯಕ್ಷತೆ ವಹಿಸಿದ್ದರು.

ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಕೆ.ಎಸ್. ಮೇದಿನಿ ಸ್ವಾಗತಿಸಿದರು. ಪ್ರಾಧ್ಯಾಪಕ ಕೆ.ಶ್ರೀಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈಶ್ವರಿ ಪ್ರಾರ್ಥನಾ ಗೀತೆ ಹಾಡಿದರು. ಮೈತ್ರಿ ಹಾಗೂ ನಾಗವೇಣಿ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ರಾಕೇಶ್ ವಂದಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-42-712120991

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.