ಹೊಸಪೇಟೆ (ವಿಜಯನಗರ): ಡಾ.ಬಿ.ಆರ್. ಅಂಬೇಡ್ಕರ್ ಅವರು ಭೂಮಿಯು ಸಮಾನವಾಗಿ ಹಂಚಿಕೆ ಆಗಬೇಕು, ಕೈಗಾರಿಕೆಗಳ ಮೇಲೆ ಪ್ರಭುತ್ವದ ಹಿಡಿತ ಇರಬೇಕು, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಸಿಗಬೇಕು ಎಂಬ ಕನಸು ಕಂಡಿದ್ದರು, ಇಂದಿಗೂ ಅದು ನನಸಾಗಿಲ್ಲ ಎಂದು ಜನಪರ ಹೋರಾಟಗಾರ ಮಾವಳ್ಳಿ ಶಂಕರ್ ಹೇಳಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ದಲಿತ ಸಂಸ್ಕೃತಿ ಅಧ್ಯಯನ ಪೀಠದ ವತಿಯಿಂದ ಬುಧವಾರ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಪ್ರಸಾರಾಂಗವು ಹೊರತಂದ ಡಾ.ಬಿ.ಆರ್.ಆಂಬೇಡ್ಕರ್ ಕುರಿತ 11 ಪುಸ್ತಕಗಳ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.

ಸಂವಿಧಾನದ ಪೂರ್ವಪೀಠಿಕೆಯಲ್ಲಿನ ಮೌಲ್ಯಗಳು ಪ್ರಾಯೋಗಿಕವಾಗಿ ಜಾರಿಯಾಗುತ್ತಿಲ್ಲ, ಸಮಾಜಮುಖಿ ವೃತ್ತಿಗಳನ್ನು ಕೀಳಾಗಿ ಕಾಣುವ ಮನೋಭಾವ ಹೆಚ್ಚಾಗುತ್ತಿದೆ. ತಳ ಸಮುದಾಯಗಳ ಮೇಲೆ ದೌರ್ಜನ್ಯ ಮತ್ತು ಹಲ್ಲೆಗಳ ಪ್ರಮಾಣ ಇತ್ತೀಚೆಗೆ ಹೆಚ್ಚುತ್ತಿದೆ. ಇದೆಲ್ಲದರ ಬಗ್ಗೆ ನಾವು ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದರು.

ಹಿರಿಯ ವಿದ್ವಾಂಸ ಜಾಣಗೆರೆ ವೆಂಕಟರಾಮಯ್ಯ ಅವರು ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ಮಹಾನ್ ವ್ಯಕ್ತಿಗಳ ತತ್ವಗಳನ್ನು ಸಮಗ್ರವಾಗಿ ಅರ್ಥ ಮಾಡಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ ಎಂದರು.

‘ಇಂದು ರಾಜಕೀಯದಲ್ಲಿ ಜಾತಿ ಮತ್ತು ಧರ್ಮವನ್ನು ಆಧಾರವಾಗಿಟ್ಟುಕೊಂಡು ಅಧಿಕಾರವನ್ನು ಹಿಡಿಯುವ ಪ್ರವೃತ್ತಿ ಹೆಚ್ಚುತ್ತಿರುವುದು ಕಳವಳಕಾರಿ. ದೇಶದ ಮಹಿಳೆಯರಿಗೆ ಸಮಾನತೆ ದೊರೆಯಬೇಕು ಮತ್ತು ಅವರು ರಾಜಕೀಯವಾಗಿ ಮುನ್ನೆಲೆಗೆ ಬರಬೇಕು ಎಂಬ ಅಂಬೇಡ್ಕರ್ ಅವರ ಕನಸು ಇಂದಿಗೂ ನನಸಾಗಿಲ್ಲ’ ಎಂದು ವಿಷಾದಿಸಿದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಡಿ.ವಿ. ಪರಮಶಿವಮೂರ್ತಿ ಮಾತನಾಡಿ, ಡಾ.ಅಂಬೇಡ್ಕರ್ ಅವರ ಕುರಿತು 11 ಕೃತಿಗಳನ್ನು ಪ್ರಸಾರಾಂಗದಿಂದ ಪ್ರಕಟಿಸುವ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಪ್ರತಿದಿನವೂ ಇಂತಹ ಮಹಾನ್ ವ್ಯಕ್ತಿಗಳನ್ನು ಸ್ಮರಿಸಿಕೊಳ್ಳಬೇಕು ಮತ್ತು ಅವರ ಚಿಂತನೆಗಳನ್ನು ಆಳವಾಗಿ ಅರ್ಥಮಾಡಿಕೊಳ್ಳಬೇಕು ಎಂದರು.

ದಲಿತ ಸಂಸ್ಕೃತಿ ಅಧ್ಯಯನ ಪೀಠದ ಸಂಚಾಲಕ ಪ್ರೊ.ಎನ್. ಚಿನ್ನಸ್ವಾಮಿ ಸೋಸಲೆ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಾನ್ ವ್ಯಕ್ತಿಗಳನ್ನು ಜಾತಿಗೆ ಸೀಮಿತವಾಗಿ ನೋಡುವ ಮನೋಭಾವವನ್ನು ತೊರೆಯಬೇಕು. ಜಾತಿ ಎಂಬ ಅಜ್ಞಾನವು ಸಮಾಜದಲ್ಲಿ ಅಂತರವನ್ನು ಉಂಟುಮಾಡುತ್ತದೆ ಎಂದರು.

ಕುಲಸಚಿವ ಪ್ರೊ.ವಿರೂಪಾಕ್ಷಿ ಪೂಜಾರಹಳ್ಳಿ, ಪ್ರಸಾರಾಂಗದ ನಿರ್ದೇಶಕ ಪ್ರೊ.ಪಿ.ಮಹಾದೇವಯ್ಯ, ಸಿಂಡಿಕೇಟ್ ಸದಸ್ಯ ಬಣ್ಣದಮನೆ ಸೋಮಶೇಖರ್ ಇದ್ವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-25-733007640

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.