ಹೊಸಪೇಟೆ (ವಿಜಯನಗರ): ಶಿಕ್ಷಣ ಸಂಸ್ಥೆಗಳು ವಂತಿಗೆ (ಡೊನೇಷನ್) ವಸೂಲಿ ಮಾಡುವುದನ್ನು ವಿರೋಧಿಸಿ ಹಾಗೂ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ರಚಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ವತಿಯಿಂದ ಗುರುವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಎಸ್ಎಫ್ಐ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವರೆಡ್ಡಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ನಿಯೋಗ, ಹೆಚ್ಚುವರಿ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ ಅವರಿಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಶಿವರೆಡ್ಡಿ ಮಾತನಾಡಿ, ‘ರಾಜ್ಯದ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು 2026–27ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ಈಗಾಗಲೆ ಮುಕ್ತಾಯಗೊಳಿಸಿವೆ. ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರವು ಸಭೆ ನಡೆಸಿ, ಖಾಸಗಿ ಶಾಲೆಗಳಲ್ಲಿನ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕಿತ್ತು’ ಎಂದರು.

‘ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಶಿಕ್ಷಣ ಇಲಾಖೆಯ ಮುಖ್ಯಸ್ಥರು, ಪಾಲಕರು, ವಿದ್ಯಾರ್ಥಿ ಸಂಘಟನೆ ಪ್ರತಿನಿಧಿಗಳ ಜಂಟಿ ಸಭೆ ಕರೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ಕೇಂದ್ರೀಯ ಶಾಸನ ಜಾರಿಗೆ ತರಬೇಕ. ಸರ್ಕಾರ ನಿಗದಿಗೊಳಿಸಿರುವ ಪ್ರವೇಶ ಶುಲ್ಕದ ವಿವರವನ್ನು ಮಾಧ್ಯಮ, ಭಿತ್ತಿಪತ್ರ ಹಾಗೂ ಕರಪತ್ರಗಳ ಮೂಲಕ ಪ್ರಚುರಪಡಿಸಬೇಕು’ ಎಂದು ಅವರು ಒತ್ತಾಯಿಸಿದರು.

ಎಸ್ಎಫ್ಐ ಪದಾಧಿಕಾರಿಗಳಾದ ಶಾರದಾ, ಪವನ್ ಕುಮಾರ್, ಲಕ್ಷ್ಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-25-1127772355

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.