ಹೊಸಪೇಟೆ (ವಿಜಯನಗರ): ‘ಶಿಕ್ಷಣವೇ ಸ್ವಾತಂತ್ರ್ಯದ ಕೀಲಿಕೈ. ಬದುಕಿನ ಹಾದಿಯಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಶಿಕ್ಷಣದ ಮೇಲಿನ ಆಸಕ್ತಿ ಮತ್ತು ನಿರಂತರ ಪರಿಶ್ರಮವಿದ್ದರೆ ಯಶಸ್ಸು ಖಂಡಿತ ಸಾಧ್ಯ. ಇದಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನವೇ ಸಾಕ್ಷಿ’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಹಾಗೂ ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಕೀಲ ಸುಧೀರ್ ಕುಮಾರ್ ಮುರಳ್ಳಿ ಮಾತನಾಡಿ, ‘ಭಾರತದ ಶೋಷಿತ ವರ್ಗಗಳಿಗೆ ಶಿಕ್ಷಣ, ಅಧಿಕಾರ ಮತ್ತು ಸಮಾನತೆಯ ಹಕ್ಕನ್ನು ತಂದುಕೊಡುವಲ್ಲಿ ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರ ಪಾತ್ರ ಅನನ್ಯವಾದುದು’ ಎಂದರು.

ಗಾಯಕ ಯಲ್ಲಪ್ಪ ಬಂಡಾರದಾರ್ ಸಂವಿಧಾನ ಪೀಠಿಕೆ ಬೋಧಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಎಸ್ಪಿ ಎಸ್. ಜಾಹ್ನವಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ, ನಗರಸಭೆ ಪೌರಾಯುಕ್ತ ಎ.ಶಿವಕುಮಾರ್, ತಹಶೀಲ್ದಾರ್ ಎಂ.ಎಂ.ಶ್ರುತಿ, ‘ಹುಡಾ’ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಮ್ ನಿಯಾಜಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಜಿಲ್ಲಾ ಅಂಬೇಡ್ಕರ್ ಸಂಘದ ಅಧ್ಯಕ್ಷ ಕೆ.ಪಿ.ಉಮಾಪತಿ, ವೀರಸ್ವಾಮಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ನಗರದ ಬಳ್ಳಾರಿ ರಸ್ತೆಯಲ್ಲಿನ ಡಾ.ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಇಸಿಒ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಎಸ್ಪಿ ಎಸ್.ಜಾಹ್ನವಿ ಅಂಬೇಡ್ಕರ್ ಮತ್ತು ಬಾಬೂಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು.

ತಮಟೆ ವಾದನ, ಕಲಾ ತಂಡಗಳ ಪ್ರದರ್ಶನ, ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರ ಜೀವನ ಸಂದೇಶ ಸಾರುವ ಸ್ತಬ್ದಚಿತ್ರಗಳು ಮೆರವಣಿಗೆಗೆ ಶೋಭೆ ತಂದವು. ಮಂಗಳವಾದ್ಯಗಳ ನಾದ, ಡೋಲು, ನಂದಿಕೋಲು ಕುಣಿತ, ತೊಗಲು ಗೊಂಬೆ ಸಾರ್ವಜನಿಕರ ಕಣ್ಮನ ಸೆಳೆಯಿತು. ಕಲಾ ತಂಡಗಳ ಹೆಜ್ಜೆಗಳೊಂದಿಗೆ ಸಾಗಿದ ಈ ಮೆರವಣಿಗೆಯು ಮೇನ್ ಬಜಾರ್, ಗಾಂಧಿ ಚೌಕ್, ಬಸ್ ನಿಲ್ದಾಣ, ಜೈ ಭೀಮ್ ವೃತ್ತ ತಲುಪಿ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸಿತು.

ಉಪವಿಭಾಗಾಧಿಕಾರಿ ವಿವೇಕಾನಂದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ, ಸಹಾಯಕ ನಿರ್ದೇಶಕಿ ಶಾಹಿಖಾ ಅಹ್ಮದಿ, ಸಮಾಜದ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-25-1243464895

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.