ಹೊಸಪೇಟೆ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುತ್ತಿದೆ. ಇದೀಗ ಪಿ.ಎಂ.ಶ್ರೀ ಶಾಲೆಗಳಿಗೆ ಕೂಡ ಸುತ್ತಲಿನ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಎಐಡಿಎಸ್ಒ ಆರೋಪಿಸಿದೆ.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಯು.ಉಮಾದೇವಿ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು, ಪಿ.ಎಂ. ಶ್ರೀ ಯೋಜನೆಯ ಹೆಸರಿನಲ್ಲಿ ರಾಜ್ಯದಾದ್ಯಂತ 317 ಶಾಲೆಗಳನ್ನು ವಿಲೀನಗೊಳಿಸಲು ಆದೇಶ ಹೊರಡಿಸಿದೆ. ಪಿಯು ಕಾಲೇಜುಗಳನ್ನು ಕೂಡ ವಿಲೀನಗೊಳಿಸಲಾಗುತ್ತಿದೆ, ಇದನ್ನು ಸಹಿಸಲಾಗದು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರವು ತನ್ನ ಹಠಮಾರಿ ಧೋರಣೆಯನ್ನು ಕೈಬಿಡಬೇಕು. ಸರ್ಕಾರದ ಈ ಬೂಟಾಟಿಕೆಯನ್ನು ಅರಿತು ‘ನಮ್ಮೂರ ಶಾಲೆ’ ಉಳಿಸುವ ಪ್ರತಿರೋಧ ಚಳವಳಿಯನ್ನು ಜನರು ಇನ್ನಷ್ಟು ಬಲಪಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-25-467650753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.