ಹೊಸಪೇಟೆ (ವಿಜಯನಗರ): ‘ಮಗು ಜನಿಸಿದ ನಂತರ ಅದರ ನ್ಯೂನತೆಗಳಿಗೆ ಚಿಕಿತ್ಸೆ ಹುಡುಕುವುದಕ್ಕಿಂತ, ಗರ್ಭಾವಸ್ಥೆಯಲ್ಲೇ ಮಗುವಿನ ಅಸಹಜತೆ ಬೆಳವಣಿಗೆ ಪತ್ತೆಹಚ್ಚುವ ಮೂಲಕ ಅಂಗವಿಕಲ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಗುವಿನ ಬೆಳವಣಿಗೆಯಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಕೂಡಲೇ ವೈದ್ಯರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಮೂಢನಂಬಿಕೆಗಳಿಗೆ ಒಳಗಾಗದೆ, ವೈಜ್ಞಾನಿಕವಾಗಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಪೋಷಕರಿಗೆ ಮನವರಿಕೆ ಮಾಡಬೇಕು’ ಎಂದರು.

‘ಗರ್ಭಧಾರಣೆಯ 18ರಿಂದ 22 ವಾರಗಳ ಅವಧಿಯಲ್ಲಿ ಮಾಡಲಾಗುವ ಅನಾಮಲಿ ಸ್ಕ್ಯಾನ್ ಬಗ್ಗೆ ನಗರ ಸೇರಿ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಗರ್ಭದಲ್ಲಿರುವ ಮಗುವಿನ ದೈಹಿಕ ಅಥವಾ ಮಾನಸಿಕ ಅಸಹಜತೆಗಳನ್ನು ಮೊದಲೇ ಪತ್ತೆಹಚ್ಚುವುದರಿಂದ ಮುಂದಾಗುವ ಅನಾಹುತ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗರ್ಭಿಣಿಯರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದು ಸೂಚಿಸಿದರು.

ಪೋಷಣ್ ಅಭಿಯಾನದಡಿ ಜಿಲ್ಲೆಯ 1,22,182 ಫಲಾನುಭವಿಗಳ ಪೈಕಿ 1,22,136 ಆಧಾರ್ ಜೋಡಣೆ ಕಾರ್ಯ ಪೂರ್ಣಗೊಳಿಸಿ ಶೇ99.96ರಷ್ಟು ಆಧಾರ್ ಜೋಡಣೆ ಪ್ರಗತಿ ಸಾಧಿಸಿದೆ. ಉಳಿದ ಪ್ರಗತಿಯನ್ನು ಶೀಘ್ರ ಪೂರ್ಣಗೊಳಿಸಲು, ತಾಂತ್ರಿಕ ದೋಷಗಳನ್ನು ಸರಿಪಡಿಸಿಕೊಂಡು ಶೇ 100ಕ್ಕೆ ಹೆಚ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಗಂಗಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-25-1038850949

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.