ಹೊಸಪೇಟೆ (ವಿಜಯನಗರ): ‘ಇತರೆ ಸಮಾಜಗಳು ಶಿಕ್ಷಣ ಸಂಸ್ಥೆಗಳಿಗೆ ಒತ್ತು ನೀಡಿದಂತೆ ಕುರುಬ ಸಮಾಜ ಶಿಕ್ಷಣ ಸಂಸ್ಥೆಗಳನ್ನು ತೆರೆದರೆ ಅದಕ್ಕೆ ಬೇಕಾದ ಸರ್ಕಾರಿ ಭೂಮಿಯನ್ನು ಒದಗಿಸಿಕೊಡಲು ಸಿದ್ಧ’ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ಇಲ್ಲಿ ಜಿಲ್ಲಾ ಕುರುಬರ ಸಂಘ ಹಾಗು ಜಿಲ್ಲಾ ಕನಕ ನೌಕರರ ಸಂಘ ಭಾನುವಾರ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ, ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಲಿಂಗಾಯತ ಸಮಾಜ ಶಿಕ್ಷಣ ಸಂಸ್ಥೆಗಳಿಗೆ ಒತ್ತು ಕೊಟ್ಟಿದೆ, ಅದೇ ರೀತಿ ಕುರುಬ ಸಮಾಜ ಸಹ ಶಿಕ್ಷಣ ಸಂಸ್ಥೆ ತೆರೆಯಲು ಆದ್ಯತೆ ನೀಡಬೇಕು, ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ, ಸಮಾಜ ಈ ಪ್ರಯತ್ನ ಮಾಡಲಿ, ಸರ್ಕಾರದಿಂದ ಒಂದೆರಡು ಎಕರೆ ಭೂಮಿ ಕೊಡಿಸುವೆ’ ಎಂದರು.

‘ಕ್ಷೇತ್ರದಲ್ಲಿ ಆನಂದ ಸಿಂಗ್ ಮತ್ತು ನನ್ನ ಅವಧಿಯಲ್ಲಿ ಹಿಂದುಳಿದ ಸಮುದಾಯಗಳಿಗೆ ಏನು ಸಹಕಾರ ಬೇಕೋ ಅದನ್ನು ನೀಡುತ್ತಾ ಬಂದಿದ್ದೇವೆ. ವಿದ್ಯಾರ್ಥಿಗಳು ಬರೀ ಎಂಬಿಬಿಎಸ್, ಎಂಜಿನಿಯರಿಂಗ್ಗಷ್ಟೇ ಆದ್ಯತೆ ನೀಡಬೇಡಿ. ಹೋಟೆಲ್ ಮ್ಯಾನೇಜಮೆಂಟ್, ಟಿವಿ, ಐಟಿ, ಬಿಟಿ, ಮೊಬೈಲ್ ರಿಪೇರಿಯಂತಹ ಕೌಶಲಾಭಿವೃದ್ದಿ ತರಬೇತಿ ಪಡೆದು ಉದ್ಯೋಗ ಪಡೆಯಲು ಮುಂದಾಗಿ’ ಎಂದು ಕಿವಿಮಾತು ಹೇಳಿದರು.

ಪ್ರತ್ಯೇಕ ಜಿಲ್ಲೆಯಿಂದ ಅನುಕೂಲ: ಮಾಜಿ ಸಚಿವ ಆನಂದ ಸಿಂಗ್ ಮಾತನಾಡಿ, ಈ ಭಾಗದಲ್ಲಿ ಹಕ್ಕಬುಕ್ಕರು ವಿಜಯನಗರ ಸಾಮ್ರಾಜ್ಯ ಕಟ್ಟಿದರು. ಅದರಂತೆ ಹಲವಾರು ವರ್ಷಗಳ ಹೋರಾಟದ ನಂತರ ಬಳ್ಳಾರಿಯಿಂದ ಬೇರ್ಪಟ್ಟು ವಿಜಯನಗರ ಜಿಲ್ಲೆಯಾಗಿದೆ. ಇದರಿಂದ ಈ ಭಾಗದ ಜನರಿಗೆ ಅನುಕೂಲವಾಗಿದೆ ಎಂದರು.

ವಿಜಯನಗರ ಗ್ಯಾರಂಟಿ ಯೋಜನೆ ಅನುಷ್ಠಾನ ಅಧ್ಯಕ್ಷ ಕುರಿ ಶಿವಮೂರ್ತಿ, ಹುಡಾ ಮಾಜಿ ಅಧ್ಯಕ್ಷ ಆರ್.ಕೊಟ್ರೇಶ್, ಜಿಲ್ಲಾ ಕುರುಬರ ಸಂಘದ ಸಂಚಾಲಕ ಬುಡ್ಡಿ ಬಸವರಾಜ, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಂ ನಿಯಾಜಿ, ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಎಫ್.ಟಿ.ಹಳ್ಳಿಕೇರಿ,ರಾಯಚೂರು ವಿವಿ ಪ್ರಾಧ್ಯಾಪಕ ಪ್ರೊ. ಕೆ.ವೆಂಕಟೇಶ, ಪ್ರೊ.ರಮೇಶ, ಮಾತನಾಡಿದರು.

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ ಅಧ್ಯಕ್ಷತೆ ವಹಿಸಿದ್ದರು. 7ನೇ ತರಗತಿ ವಿದ್ಯಾರ್ಥಿ ಅಂತರಾಷ್ಟ್ರೀಯ ಯೋಗ ಪ್ರತಿಭೆ ಶ್ಯಾಮ್ ಯೋಗ ಪ್ರದರ್ಶಿಸಿದ. 200 ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕುಲಗುರು ಕೊಟ್ರೇಶ ಒಡೆಯರ್, ಗುರುನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮುಖಂಡರಾದ ಅಯ್ಯಾಳಿ ಮೂರ್ತಿ,ರಾಮಚಂದ್ರಗೌಡ, ಎಲ್.ಎಸ್.ಆನಂದ, ಕೆ.ರವಿಕುಮಾರ್, ಸಾಲಿ ವೆಂಕಟೇಶ, ಎಚ್.ಮಹೇಶ, ವೈ.ಎರಿಸ್ವಾಮಿ, ಪಲ್ಲೇದ ಸಿದ್ದೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-25-1530200533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.