ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಪಿಎಚ್‌.ಡಿ ಮಾಡುವುದು ಹೇಗೆ?

Published : 16 ಸೆಪ್ಟೆಂಬರ್ 2024, 0:40 IST
Last Updated : 16 ಸೆಪ್ಟೆಂಬರ್ 2024, 0:40 IST
ಫಾಲೋ ಮಾಡಿ
Comments

ಎಂಎ (ಕನ್ನಡ) ಮಾಡುತ್ತಿದ್ದು,  ಮುಂದೆ ಪಿಎಚ್‌.ಡಿ ಮಾಡಬೇಕು. ದಯವಿಟ್ಟು ಮಾರ್ಗದರ್ಶನ ನೀಡಿ.
ಹೆಸರು, ಊರು ತಿಳಿಸಿಲ್ಲ.

ಸಾಮಾನ್ಯವಾಗಿ, ಪಿಎಚ್‌ಡಿ ಮಾಡಲು ಪ್ರಕ್ರಿಯೆ ಹೀಗಿರುತ್ತದೆ:

  • ಪಿಎಚ್‌.ಡಿಗೆ ಅಗತ್ಯವಾದ ಸಂಶೋಧನೆಯ ವಿಷಯವನ್ನು ನಿರ್ಧರಿಸುವುದು ಸುಲಭವಲ್ಲ. ವಿಷಯದ ಪ್ರಸ್ತುತತೆ, ವಿಷಯದ ಕುರಿತು ಸ್ವಾಭಾವಿಕವಾದ ಒಲವು ಮತ್ತು ಪ್ರೇರಣೆಯ ಜೊತೆಗೆ ಮಾರ್ಗದರ್ಶಕರ ಸಕಾರಾತ್ಮಕ ಅಭಿಪ್ರಾಯ ಮತ್ತು ಬೆಂಬಲವಿರಬೇಕು. ಹಾಗಾಗಿ, ವಿಷಯದ ಕುರಿತು ಪ್ರಾಥಮಿಕ ಸಂಶೋಧನೆ ಅಗತ್ಯ.

  • ಪಿಎಚ್‌.ಡಿ ಕೋರ್ಸಿನಲ್ಲಿ ನೀವು ಮಾಡುವ ಸಂಶೋಧನೆ ಕುರಿತ ಸುದೀರ್ಘ ಪ್ರಸ್ತಾವನೆಯನ್ನು ತಯಾರಿಸಬೇಕು. ಇದರ ಆಧಾರದ ಮೇಲೆ ವಿಶ್ವವಿದ್ಯಾಲಯದ ಅನುಮತಿ ಸಿಗುತ್ತದೆ.

  • ವಿಶ್ವವಿದ್ಯಾಲಯಗಳು ಪ್ರತಿ ವರ್ಷದ ಪಿಎಚ್‌.ಡಿ ಕಾರ್ಯಕ್ರಮಗಳಲ್ಲಿ ನಿರ್ದಿಷ್ಟ ಸಂಖ್ಯೆಯ ಅವಕಾಶಗಳನ್ನು ಹೊಂದಿರುತ್ತವೆ. ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರವೇಶ ಪರೀಕ್ಷೆಗಳು, ಸಂದರ್ಶನಗಳು ಮತ್ತು ಸಂಶೋಧನಾ ಪ್ರಸ್ತಾವನೆಯ ಮೌಲ್ಯಮಾಪನ ಇತ್ಯಾದಿ ಪ್ರಕ್ರಿಯೆಗಳಿರುತ್ತದೆ.

  • ಪಿಎಚ್‌.ಡಿ ಕೋರ್ಸಿಗೆ ಆಯ್ಕೆಯಾದ ನಂತರ ಸಂಶೋಧನೆಯನ್ನು ಪೂರ್ಣಗೊಳಿಸಿ ಮಹಾಪ್ರಬಂಧವನ್ನು (ಥೀಸಿಸ್) ಬರೆದು ವಿಶ್ವವಿದ್ಯಾಲಯಕ್ಕೆ ಸಲ್ಲಿಸಬೇಕು. ಇದಲ್ಲದೆ, ವಿಶ್ವವಿದ್ಯಾಲಯದ ನಿಯಮಾವಳಿಗಳಂತೆ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಸಂಶೋಧನಾತ್ಮಕ ಲೇಖನಗಳನ್ನು ಪ್ರಕಟಿಸಬೇಕು.

  • ನೀವು ಸಲ್ಲಿಸಿದ ಮಹಾಪ್ರಬಂಧವನ್ನು ವಿಷಯತಜ್ಞರ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ.

  • ಮಹಾಪ್ರಬಂಧವನ್ನು ವಿಶ್ವವಿದ್ಯಾಲಯ ಸ್ವೀಕಾರ ಮಾಡಿದ ನಂತರ ಪಿಎಚ್‌.ಡಿ ಪದವಿಯನ್ನು ನೀಡಲಾಗುತ್ತದೆ. ಈ ಪ್ರಕ್ರಿಯೆಗೆ 3-5 ವರ್ಷ ಬೇಕಾಗಬಹುದು. ಪ್ರತಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ನಿಯಮಾವಳಿಗಳು, ಶುಲ್ಕಗಳು, ವಿದ್ಯಾರ್ಥಿ ವೇತನ, ಅನುದಾನ ಇತ್ಯಾದಿಗಳು ವಿಭಿನ್ನವಾಗಿರುತ್ತದೆ.

    ಹೆಚ್ಚಿನ ಮಾರ್ಗದರ್ಶನಕ್ಕಾಗಿವೀಕ್ಷಿಸಿ: https://www.youtube.com/watch?v=Mb4PKUb35_Q

ಪ್ರ

ನಾನು ಬಿಕಾಂ ಮಾಡುತ್ತಿದ್ದು ಮುಂದೆ ಎಂಬಿಎ ಮಾಡಿದರೆ ಉದ್ಯೋಗಾವಕಾಶಗಳು ಹೇಗಿವೆ?
ಹೆಸರು, ಊರು ತಿಳಿಸಿಲ್ಲ.

ಉದ್ಯಮಗಳ ಅಭಿವೃದ್ಧಿಗಾಗಿ, ಸಂಪನ್ಮೂಲಗಳನ್ನು ವ್ಯವಸ್ಥಿತವಾಗಿ ಉಪಯೋಗಿಸುವ ಯೋಜನೆಗಳನ್ನು ರಚಿಸಿ, ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವುದೇ ಮ್ಯಾನೇಜ್‌ಮೆಂಟ್‌ನ ಮೂಲ ಉದ್ದೇಶ. ಈ ಜವಾಬ್ದಾರಿಗಳನ್ನು ನಿರ್ವಹಿಸಲು, ಸಮಗ್ರವಾದ ಜ್ಞಾನ ಮತ್ತು ಕೌಶಲಗಳನ್ನು ಎಂಬಿಎ ಕೋರ್ಸಿನಲ್ಲಿ ನೀಡಲಾಗುತ್ತದೆ. ಇದಲ್ಲದೆ, ಉದ್ಯಮಗಳಲ್ಲಿ ಪ್ರಾಯೋಗಿಕವಾದ ತರಬೇತಿಯನ್ನು ಪ್ರಾಜೆಕ್ಟ್‌ಗಳ ಮುಖಾಂತರ ನೀಡುವುದರಿಂದ ಕಲಿಕೆ ಪರಿಪೂರ್ಣವಾಗುತ್ತದೆ. ನಿಮ್ಮ ನೈಪುಣ್ಯ ಮತ್ತು ಚತುರತೆ ವರ್ಧಿಸಿ, ಯಾವುದೇ ಕೆಲಸವನ್ನು ನಿಭಾಯಿಸುವ ಆತ್ಮವಿಶ್ವಾಸ ಬೆಳೆಯುತ್ತದೆ. ಒಟ್ಟಾರೆ, ಎಂಬಿಎ ಕಲಿಕೆಯ ವೈವಿಧ್ಯತೆಗಳಿಂದ ನಿಮ್ಮ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯಾಗಿ, ಆಕರ್ಷಕವಾದ ಉದ್ಯೋಗಾವಕಾಶಗಳಿವೆ. ಹೆಚ್ಚಿನ ಮಾಹಿತಿಗಾಗಿ ವೀಕ್ಷಿಸಿ: https://www.youtube.com/watch?v=1TcHjPKJ1gw

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT