ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲಿಷ್‌ ಕಲಿಕೆ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ

Last Updated 2 ಅಕ್ಟೋಬರ್ 2022, 19:30 IST
ಅಕ್ಷರ ಗಾತ್ರ

1. ನನಗೆ ಇಂಗ್ಲಿಷ್ ಮಾತನಾಡಲು ಹಿಂಜರಿಕೆಯಿದೆ. ಕನ್ನಡ ಮಾಧ್ಯಮದಲ್ಲಿ ಕಲಿತ ನನಗೆ, ಇಂಗ್ಲಿಷ್‌ನಲ್ಲಿ ನಿರರ್ಗಳವಾಗಿ ಮಾತನಾಡಬೇಕೆಂಬ ಆಸೆಯಿದೆ. ಇದಕ್ಕೆ ಯಾವ ರೀತಿಯ ಪರಿಣಾಮಕಾರಿ ತಯಾರಿ ಮಾಡಬೇಕು ಎಂದು ದಯವಿಟ್ಟು ತಿಳಿಸಿ.

ರಾಜೇಶ್, ರಂಗನತಿಟ್ಟು.

ಇಂಗ್ಲಿಷ್‌ ಭಾಷೆ ಕಬ್ಬಿಣದ ಕಡಲೆಯಲ್ಲ; ನಿಮ್ಮ ಅಗತ್ಯಕ್ಕೆ ತಕ್ಕಂತೆ ಸೂಕ್ತವಾದ ಕಾರ್ಯತಂತ್ರ ಮತ್ತು ಪರಿಶ್ರಮ ವಿದ್ದಲ್ಲಿ, ಇಂಗ್ಲಿಷ್ ಕಲಿಯಬಹುದು. ಮೊದಲಿಗೆ, ಈ ಸಲಹೆಗಳನ್ನು ಅನುಸರಿಸಿ:

ಆತ್ಮವಿಶ್ವಾಸ: ಇಂಗ್ಲಿಷ್ ಭಾಷೆಯನ್ನು ಕಲಿಯುವಾಗ ಹಿಂಜರಿಕೆಯಿಲ್ಲದೆ, ಆತ್ಮವಿಶ್ವಾಸದಿಂದ ಪ್ರಾರಂಭಿಸಿ.

ಓದುವುದು: ಇಂಗ್ಲಿಷ್ ದಿನ ಪತ್ರಿಕೆಗಳನ್ನು, ಪುಸ್ತಕಗಳನ್ನು, ಲೇಖನಗಳನ್ನು ದಿನನಿತ್ಯ ಓದಿ. ಪದಬಳಕೆ, ವಾಕ್ಯ ರಚನೆ, ವ್ಯಾಕರಣವನ್ನು ಗಮನಿಸಿ. ಸಾಧ್ಯವಾದರೆ, ಉಚ್ಛಾರಣೆಗೆ ಸಹಾಯವಾಗುವಂತೆ ಜೋರಾಗಿ ಓದಿ. ಅರ್ಥವಾಗದ ಪದಗಳನ್ನು ನಿಘಂಟಿನ ಮೂಲಕ ಅರ್ಥೈಸಿಕೊಳ್ಳಿ.

ಮಾತನಾಡುವುದು: ಆತ್ಮೀಯರೊಂದಿಗೆ ವಿಷಯಗಳನ್ನು ಸರಳವಾಗಿ ಇಂಗ್ಲಿಷ್‌ನಲ್ಲೇ ಮಾತನಾಡಲು ಪ್ರಯತ್ನಿಸಿ. ತಪ್ಪು-ಒಪ್ಪುಗಳಾದಲ್ಲಿ, ಸಂಕೋಚ ಪಡದೆ ಪ್ರಯತ್ನವನ್ನು ಮುಂದುವರೆಸಿ. ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಲು, ಕನ್ನಡಿಯ ಮುಂದೆ ಆಂಗಿಕ ಭಾಷೆಯನ್ನು ಬಳಸಿ ಮಾತನಾಡಿ.

ಬರೆಯುವುದು: ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ವಾಕ್ಯರಚನೆಯಲ್ಲಿರುವ ವ್ಯತ್ಯಾಸಗಳನ್ನು ಗಮನಿಸಿ, ಕಂಪ್ಯೂಟರ್‌ನಲ್ಲಿಯೇ ಸರಳ ವಾಕ್ಯಗಳನ್ನು ರಚಿಸಿ, ಕಾಲಕ್ರಮೇಣ ಕ್ಲಿಷ್ಟವಾದ ವಾಕ್ಯಗಳನ್ನು ರಚಿಸಲು ಪ್ರಾರಂಭಿಸಿ. ನೀವು ರಚಿಸಿದ ವಾಕ್ಯಗಳ ವ್ಯಾಕರಣದ ಲೋಪಗಳನ್ನು ಆಪ್ಸ್ (ಮೈಕ್ರೊಸಾಫ್ಟ್ ವರ್ಡ್, ಗ್ರಾಮರ್ಲಿ ಇತ್ಯಾದಿ) ಮೂಲಕ ಸರಿಪಡಿಸಿ. ಆಪ್ಸ್ ಸೆಟಿಂಗ್ಸ್ ಅನ್ನು ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೊಂದಿಸಿ.

ವೀಡಿಯೊ, ಚಲನಚಿತ್ರಗಳ ವೀಕ್ಷಣೆ: ಕನ್ನಡದ ಉಪಶೀರ್ಷಿಕೆಗಳಿರುವ(Sub title) ಇಂಗ್ಲಿಷ್ ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು, ಸಾಕ್ಷ್ಯಚಿತ್ರಗಳನ್ನು ವೀಕ್ಷಿಸಿ. ಅದೇ ರೀತಿ, ಯೂಟ್ಯೂಬ್‌ನಲ್ಲಿ ಇಂಗ್ಲಿಷ್ ಕಲಿಕೆಗೆ ನೆರವಾಗುವ ವೀಡಿಯೋಗಳನ್ನು ವೀಕ್ಷಿಸಿ. ಸಾಧಕರ ಭಾಷಣಗಳನ್ನು ಕೇಳುವುದರಿಂದ ಪ್ರೇರೇಪಿತರಾಗುವುದರ ಜೊತೆಗೆ ಇಂಗ್ಲಿಷ್ ಕಲಿಯುವಿಕೆಗೆ ಸಹಾಯವಾಗುತ್ತದೆ.

ಮೊಬೈಲ್ ಅಪ್ಲಿಕೇಶನ್ಸ್ ಬಳಕೆ: ಇಂಗ್ಲಿಷ್ ಕಲಿಕೆಗೆ ಅನುಕೂಲವಾಗುವ ಹಲವಾರು ಮೊಬೈಲ್ ಅಪ್ಲಿಕೇಶನ್‌ಗಳಿವೆ (ಹಲೊ ಇಂಗ್ಲಿಷ್, ಡ್ಯುಒಲಿಂಗೊ, ಹೆಲೊ ಟಾಕ್ ಇತ್ಯಾದಿ). ಇವುಗಳನ್ನು ಬಳಸಿ.

ಈ ಮೇಲಿನ ಸಲಹೆಗಳನ್ನು ನಿರಂತರವಾಗಿ ಕೆಲವು ತಿಂಗಳ ಕಾಲ ಅನುಸರಿಸಿ. ನಂತರ ನಿಮ್ಮ ಇಂಗ್ಲಿಷ್ ಕಲಿಕೆ ಒಂದು ಹಂತಕ್ಕೆ ತಲುಪುತ್ತದೆ.

ಇನ್ನಷ್ಟು ಪ್ರಶ್ನೋತ್ತರಗಳಿಗಾಗಿ: https://www.prajavani.net/education ನೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT