ಹುಬ್ಬಳ್ಳಿ: ಇಲ್ಲಿಯ ಆನಂದನಗರ ರಸ್ತೆಯ ಹನುಮಯ್ಯ ಸ್ವಾಮಿ ಬಡಾವಣೆಯಲ್ಲಿರುವ ಅಂಧ ಬಾಲಕರ ಸರ್ಕಾರಿ ಪಾಠಶಾಲೆಯ 2026/27ನೇ ಶೈಕ್ಷಣಿಕ ವರ್ಷಕ್ಕೆ 1 ರಿಂದ 10ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಶಿಕ್ಷಣದ ಜೊತೆಗೆ ವಿಸನ್–ಎಂಪವರ್, ಇಕ್ವಿ–ಬೀಯಿಂಗ್ ಪ್ರತಿಷ್ಠಾನಗಳ ಪ್ರಾಯೋಜಕತ್ವದಡಿ ವಿಜ್ಞಾನ, ಗಣಿತ, ಕಂಪ್ಯೂಟರ್ ಶಿಕ್ಷಣ, ಸ್ಪೋಕನ್ ಇಂಗ್ಲಿಷ್ ಹಾಗೂ ದೈಹಿಕ ಶಿಕ್ಷಣಗಳ ತರಬೇತಿ ನೀಡಲಾಗುತ್ತದೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಪಠ್ಯ ವಿಷಯವಾಗಿ ಕಲಿಸಲಾಗುತ್ತದೆ. ಪ್ರವೇಶಕ್ಕೆ ಯಾವುದೇ ಶುಲ್ಕವಿಲ್ಲ. ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯವಿದ್ದು, ಶೇ 45 ಅಥವಾ ಅದಕ್ಕಿಂತ ಹೆಚ್ಚು ಅಂಧತ್ವ ಹೊಂದಿದ ಮಕ್ಕಳಿಗೆ ಪ್ರವೇಶ ನೀಡಲಾಗುವುದು. ಮಾಹಿತಿಗೆ ಮೊ. 99644 39770 ಸಂಪರ್ಕಿಸಬಹುದು ಎಂದು ಅಂಧ ಬಾಲಕರ ಸರ್ಕಾರಿ ಪಾಠಶಾಲೆಯ ಅಧೀಕ್ಷಕ ರಾಜಕುಮಾರ ಸಾಬೋಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-24-1111846513

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.