ಹುಬ್ಬಳ್ಳಿ: ‘ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿ ಅವರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವಲ್ಲಿ ಪೋಷಕರ ಮತ್ತು ಶಿಕ್ಷಕರ ಜವಾಬ್ದಾರಿ ಮಹತ್ವದ್ದಾಗಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಹೇಳಿದರು.

ನಗರದ ಕೇಶವ ವಿದ್ಯಾ ಕೇಂದ್ರದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕೇಂದ್ರದ ಎರಡನೇ ಮಹಡಿಯ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದರು.

‘ಶಿಕ್ಷಣವು ಪಠ್ಯ ವಿಷಯಗಳಿಗೆ ಮಾತ್ರ ಸೀಮಿತವಾಗದೆ ಮಕ್ಕಳಿಗೆ ದೇಶಭಕ್ತಿ, ಸಂಸ್ಕೃತಿ, ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಕಲಿಸಬೇಕಿದೆ. ಇದು ವಿದ್ಯಾರ್ಥಿಯ ಸಮಗ್ರ ಬೆಳವಣಿಗೆಗೆ ಸಹಕಾರಿ ಆಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾ ಕೇಂದ್ರವನ್ನು ಆರಂಭಿಸಲಾಗಿದೆ. ಶಿಕ್ಷಣ ಕೇಂದ್ರದ ಬೆಳವಣಿಗೆಗೆ ಸಮುದಾಯದ ಸಹಕಾರವೂ ಮುಖ್ಯವಾಗಿರುತ್ತದೆ’ ಎಂದರು.

ಗದಗನ ಶಿವಾನಂದ ಬೃಹನ್ಮಠದ ಸದಾಶಿವಾನಂದ ಸ್ವಾಮೀಜಿ ಅವರು, ‘ಮಕ್ಕಳಿಗೆ ಕಲಿಸುವುದು, ತಿದ್ದುವುದು ಹಾಗೂ ಅವರ ಭವಿಷ್ಯ ರೂಪಿಸುವುದು ಶಿಕ್ಷಣದ ಮೂಲ ಉದ್ದೇಶ. ಇದು ಅವರ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಆದರೆ, ಇದು ಆಗುತ್ತಿಲ್ಲ. ಶಿಕ್ಷಣ ಕ್ಷೇತ್ರವು ಉದ್ಯಮವಾಗಿ ಬೆಳೆದಿದೆ’ ಎಂದರು.

‘ಮೊದಲಿದ್ದ ಗುರುಕುಲ ಶಿಕ್ಷಣ ಪದ್ಧತಿಯಲ್ಲಿ ಕೇವಲ ಪುಸ್ತಕ ಜ್ಞಾನವಷ್ಟೇ ಅಲ್ಲ, ಜೀವನದ ಮೌಲ್ಯ, ಸಂಸ್ಕಾರವನ್ನು ತಿಳಿಸಲಾಗುತ್ತಿತ್ತು. ವೇದ ಉಪನಿಷತ್ತು, ಆಧ್ಯಾತ್ಮಕ ಚಿಂತನೆಯನ್ನೂ ಹೇಳಿಕೊಡಲಾಗುತ್ತಿತ್ತು. ಶಿಸ್ತು, ಸಂಯಮ ಮತ್ತು ಸದಾಚಾರವನ್ನು ಬೆಳೆಸಲಾಗುತ್ತಿತ್ತು. ಆದರೆ, ಈಗಿನ ಶಿಕ್ಷಣ ವ್ಯವಸ್ಥೆ ಉದ್ಯಮವಾಗಿರುವ ಕಾರಣ, ಇವುಗಳು ವಿರಳವಾಗಿದೆ’ ಎಂದರು.

ಕೇಶವ ವಿದ್ಯಾ ಕೇಂದ್ರ ಪ್ರಗತಿಗೆ ಸಹಕರಿಸಿದ ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ವಿವೇಕ ಮೊಕಾಶಿ, ಶಿವಾನಂದ ಅವಟಿ, ವಿನೋದ ಪಟವಾ ಹಾಗೂ ಹಲವು ದಾನಿಗಳನ್ನು ಸನ್ಮಾನಿಸಲಾಯಿತು.

ಕೇಶವ ವಿದ್ಯಾ ಕೇಂದ್ರದ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಮಾತನಾಡಿದರು. ಕೇಂದ್ರದ ಅಧ್ಯಕ್ಷ ಶಿವಲಿಂಗಯ್ಯ ಶಿವಯೋಗಿಮಠ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಶ್ರೀಧರ ಜೋಶಿ, ವೀರೇಂದ್ರ ಕೌಜಲಗಿ, ರಾಮಣ್ಣ ಬಡಿಗೇರ, ಸಂಜೀವ ಜೋಶಿ, ಶರಾವತಿ ಕುಲಕರ್ಣಿ, ಗೌತಮ ಬಾಫಣಾ ಹಾಗೂ ಗಣ್ಯರು ಹಾಜರಿದ್ದರು. ವಿಜಯಲಕ್ಷ್ಮಿ ಹಿರೇಮಠ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-24-1605552344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.